ತಹಶೀಲ್ದಾರ್‌ ವರ್ಗಾವಣೆ ಖಂಡಿಸಿ ಪ್ರತಿಭಟನೆ

7

ತಹಶೀಲ್ದಾರ್‌ ವರ್ಗಾವಣೆ ಖಂಡಿಸಿ ಪ್ರತಿಭಟನೆ

Published:
Updated:
Deccan Herald

ದೊಡ್ಡಬಳ್ಳಾಪುರ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಂತಹ ಅಧಿಕಾರಿಗಳನ್ನು ರಾಜಕೀಯ ಒತ್ತಡ ತಂದು ವರ್ಗಾವಣೆ ಮಾಡಿಸಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಓ.ಎಂ.ನಾರಾಯಣಸ್ವಾಮಿ ಎಚ್ಚರಿಕೆ ನೀಡಿದರು.

ತಹಶೀಲ್ದಾರ್ ಬಿ.ಎ.ಮೋಹನ್ ವರ್ಗಾವಣೆ ಖಂಡಿಸಿ ನಗರದ ತಾಲ್ಲೂಕು ಕಚೇರಿ ಆರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ನಗರಕ್ಕೆ ವರ್ಗಾವಣೆಯಾಗಿ ಬಂದಾಗಿನಿಂದ ತಹಶೀಲ್ದಾರ್ ಬಿ.ಎ.ಮೋಹನ್ ಉತ್ತಮ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಭೂ ಮಾಫಿಯ ಒತ್ತಡಕ್ಕೆ ಮಣಿದು ರಾಜಕೀಯ ಪ್ರೇರಿತ ವರ್ಗಾವಣೆ ಮಾಡಿಸಿರುವುದು ಖಂಡನೀಯ. ಸರ್ಕಾರದ ವರ್ಗಾವಣೆ ಆದೇಶವನ್ನು ಕೆಎಟಿ ತಡೆಹಿಡಿದಿದೆ. ಇದನ್ನು ಹಿಂದಕ್ಕೆ ಪಡೆದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದರು.

ಪ್ರತಿಭಟನೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಕೆ.ರಾಜು, ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ನಾಗರಾಜು, ತಾಲ್ಲೂಕು ಅಧ್ಯಕ್ಷ ಚೆಲುವಹನುಮಯ್ಯ, ಪ್ರಧಾನ ಕಾರ್ಯದರ್ಶಿ ಚಿ.ನ.ರಾಮು, ಮುಖಂಡರಾದ ರಾಜು, ಶಂಕರ್‌ನಾಗ್‌ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !