ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್ ಮಾರಾಟಗಾರರಿಗೆ ಎಚ್ಚರಿಕೆ

Last Updated 29 ಅಕ್ಟೋಬರ್ 2020, 4:14 IST
ಅಕ್ಷರ ಗಾತ್ರ

ಸೂಲಿಬೆಲೆ: ಪ್ಲಾಸ್ಟಿಕ್ ಬ್ಯಾಗ್, ಲೋಟ ಸೇರಿದಂತೆ ಎಲ್ಲಾ ರೀತಿಯ ಪ್ಲಾಸ್ಟಿಕ್ ಬಳಕೆಯನ್ನು ಸರ್ಕಾರ ನಿಷೇಧಿಸಿದ್ದರೂ, ಪಟ್ಟಣದ ಅಂಗಡಿಗಳಲ್ಲಿ ಪ್ಲಾಸ್ಟಿಕ್‌ ಬಳಕೆಯಾಗುತ್ತಿರುವುದು ಕಂಡುಬಂದಿದೆ. ಅಂಗಡಿಗಳಲ್ಲಿ ಶೇಖರಿಸಿಟ್ಟ ಪ್ಲಾಸ್ಟಿಕ್ ಲೋಟ, ಕವರ್ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೊಸಕೋಟೆ ತಾಲ್ಲೂಕು ವೈದ್ಯಾಧಿಕಾರಿ ಡಾ.ಮಂಜುನಾಥ್ ತಿಳಿಸಿದರು.

ಪಟ್ಟಣದಲ್ಲಿ ಮಾಸ್ಕ್ ಧರಿಸದೆ ಓಡಾಡುವ ವ್ಯಕ್ತಿಗಳ ಸಂಖ್ಯೆ ಹೆಚ್ಚಾಗಿದೆ. ಮಾಸ್ಕ್ ಧರಿಸದವರಿಗೆ ತಿಳಿವಳಿಕೆ ನೀಡುವ ಯೋಜನೆ ರೂಪಿಸಲಾಗಿತ್ತು. ಪಟ್ಟಣದ ಹೋಟೆಲ್, ಕಿರಾಣಿ ಅಂಗಡಿಗಳು, ಬೇಕರಿ ಬಳಿ ಕುಳಿತುಕೊಳ್ಳುವ ಸಾರ್ವಜನಿಕರಿಗೆ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ವೇಳೆ ಹಲವು ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ಮಾಡುವುದು ಕಂಡುಬಂದಿತು. ಈ ಹಿನ್ನೆಲೆಯಲ್ಲಿ ಕೆಲವು ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ಕವರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳ ಸಹಯೋಗದಲ್ಲಿ ಮುಂದಿನ ವಾರ ಮತ್ತೆ ದಾಳಿ ನಡೆಸಲಾಗುವುದು. ಪ್ಲಾಸ್ಟಿಕ್ ಮಾರಾಟ ಮಾಡುವ ವರ್ತಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಾಸ್ಕ್ ಧರಿಸದ 41 ವ್ಯಕ್ತಿಗಳಿಂದ ₹ 4,100 ದಂಡ ವಸೂಲಿ ಮಾಡಲಾಯಿತು.

ಆರೋಗ್ಯ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT