ದೇವನಹಳ್ಳಿ: ‘ತಾಲ್ಲೂಕಿನಲ್ಲಿ ಎಚ್.ಎನ್. ವ್ಯಾಲಿ ತ್ಯಾಜ್ಯ ಸಂಸ್ಕರಿಸಿದ ನೀರು ಕೆರೆಗಳಿಗೆ ಹರಿಸುವ ಕುರಿತು ಠರಾವು ಮಂಡಿಸಿ ಸರ್ವ ಸದಸ್ಯರ ನಿರ್ಣಯವನ್ನು ಸರ್ಕಾರಕ್ಕೆ ಕಳುಹಿಸಿಕೊಡಿ’ ಎಂದು ಸರ್ವ ಸದಸ್ಯರು ಒಕ್ಕೊರಲಿನಿಂದ ಒತ್ತಾಯಿಸಿದರು.

‘ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಪಂಚಾಯಿತಿ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರಾದ ಕಾರಹಳ್ಳಿ ಶ್ರೀನಿವಾಸ್, ದಿನ್ನೂರು ವೆಂಕಟೇಶ್, ಎಚ್.ಎನ್ ವ್ಯಾಲಿ ಯೋಜನೆ ಬರಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಸಿಮಿತವಾಗಿರುವಂತಿದೆ. ಬೆಂಗಳೂರಿನ ನಗರದಿಂದ ದೇವನಹಳ್ಳಿತಾಲ್ಲೂಕು ಮೂಲಕ ಪೈಪ್ ಲೈನ್ ಹಾದು ಹೋಗಿದ್ದರೂ ಬರಿ 9 ಕೆರೆಗಳಿಗೆನೀರು ಹರಿದು ತುಂಬಿಸಲುಆಗುತ್ತಿಲ್ಲವೆಂದರೆ ಹೇಗೆ?’ ಎಂದು ಹರಿಹಾಯ್ದರು.

‘ವ್ಯಾಲಿ ನೀರು ಪೂರೈಕೆಯಲ್ಲಿ ಕೇವಲ 9 ಕೆರೆಯನ್ನು ಮಾತ್ರ ಸೇರಿಸಲಾಗಿದೆ. ತಾಲ್ಲೂಕಿನಲ್ಲಿ ನೂರಾರು ಕೆರೆಗಳನ್ನು ಯೋಜನಾ ಸಮಗ್ರ ವರದಿಯಲ್ಲಿ ಸೇರ್ಪಡೆ ಮಾಡಲೇಬೇಕು. ತಾಲ್ಲೂಕಿನಲ್ಲಿ ಅಂತರ್ಜಲ ಕುಸಿದು ಹತ್ತಾರು ಹಳ್ಳಿಗಳಲ್ಲಿ ಮಳೆಗಾಲದಲ್ಲಿಯೂ ಟ್ಯಾಂಕರ್ ಮೂಲಕ ಕುಡಿಯುವ ನೀರು ಎಂದರೆ ಭವಿಷ್ಯದ ಪರಿಸ್ಥಿತಿಯನ್ನು ನಿಭಾಯಿಸುವುದಾದರೆ ಹೇಗೆ? ಠರಾವು ಮಂಡಿಸಿ ತ್ವರಿತವಾಗಿ ಕಡತವನ್ನು ಸರ್ಕಾರಕ್ಕೆ ಕಳುಹಿಸಿ’ ಎಂದು ಕಾರ್ಯನಿರ್ವಹಣಾಧಿಕಾರಿಗೆ ತಾಕೀತು ಮಾಡಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈಮರ್ಲ್ಯ ಇಲಾಖೆ ಎಂಜಿನಿಯರ್ ಸೋಮಶೇಖರ್ ಮಾಹಿತಿ ನೀಡಿ, ‘ತಾಲ್ಲೂಕಿನಲ್ಲಿ ಕಳೆದ ಆರು ತಿಂಗಳ ಹಿಂದೆ ಕೊರೆಯಿಸಿದ 30 ಕೊಳವೆ ಬಾವಿ ಪೈಕಿ 10 ವಿಫಲವಾಗಿವೆ. 46 ಕೊಳವೆ ಬಾವಿ ಕೊರೆಯಿಸಲು ಕ್ರಿಯಾ ಯೋಜನೆ ರೂಪಿಸಿ ₹ 2 ಕೋಟಿ ಅನುದಾನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ. ಸರ್ಕಾರದಿಂದ ಮಾಹಿತಿ ಬಂದಿಲ್ಲ. ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಅಡಿ ಕೇಂದ್ರದಿಂದ ಕಳೆದ ಒಂದು ವರ್ಷದಿಂದ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಪ್ರಸ್ತುತ ಐದು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ’ ಎಂದು ಸಭೆಗೆ ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್ ಮಾತನಾಡಿ, ‘ತಾಲ್ಲೂಕು ಕೇಂದ್ರದಲ್ಲಿ 26 ವೆಂಟಿಲೇಟರ್ಇದೆ. ಐದು ಅಂಬುಲೆನ್ಸ್ ಸದಾ ಸಿದ್ಧತೆಯಲ್ಲಿಸಲಾಗಿದೆ. 3,726 ಮಂದಿಯನ್ನು ಪರೀಕ್ಷಿಸಲಾಗಿದೆ. ಪ್ರಸ್ತುತ ತಾಲ್ಲೂಕಿನಲ್ಲಿಯೂ 36 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ವೆಚ್ಚದ ಅನುದಾನ ಕಂದಾಯಇಲಾಖೆ ಅಡಿ ಬರುತ್ತದೆ’ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಆನಂದ್ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ವಸಂತಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.