ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

ನವೆಂಬರ್ 2 ರಂದು 13 ಜನ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ‘ಎ’ ತರಗತಿಗೆ 5 ಸ್ಥಾನ, ‘ಬಿ’ ತರಗತಿಗೆ 8 ಸ್ಥಾನಗಳಿವೆ. 8 ಜನ ನಿರ್ದೇಶಕ ಸ್ಥಾನಗಳ ಪೈಕಿ 2 ಸಾಮಾನ್ಯ ಅಭ್ಯರ್ಥಿಗಳಿಗೆ, 1 ಬಿಸಿಎಂ ‘ಬಿ’, 1 ಬಿಸಿಎಂ ‘ಎ’, 2 ಮಹಿಳಾ ಅಭ್ಯರ್ಥಿಗಳಿಗೆ, 1 ಪರಿಶಿಷ್ಟ ಜಾತಿ, 1 ಪರಿಶಿಷ್ಠ ಪಂಗಡಕ್ಕೆ ಮೀಸಲಾಗಿದೆ. ಉಳಿದಂತೆ ಬಿಡಿಸಿಸಿ ಬ್ಯಾಂಕ್ ಪ್ರತಿನಿಧಿಯಾಗಿ 1 ಹಾಗೂ ಸರ್ಕಾರದ ನಾಮನಿರ್ದೇಶನದ ಮೂಲಕ ಒಬ್ಬರು ನೇಮಕವಾಗಲಿದೆ.

ನಾಮಪತ್ರ ವಾಪಸ್:

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಟಿ.ಎ.ಪಿ.ಎಂ.ಸಿ.ಎಸ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಪ್ರಾಧಿಕಾರದ ಸದಸ್ಯ ಹಾಗೂ ಟಿ.ಎ.ಪಿ.ಎಂ.ಸಿ.ಎಸ್ ಮಾಜಿ ನಿರ್ದೇಶಕ ಎನ್. ರಂಗಪ್ಪ ಅವರು ಸೋಮವಾರ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ.

ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಮಾಜಿ ಶಾಸಕ ವೆಂಕಟರಮಣಯ್ಯ, ಜಿ.ಚುಂಚೇಗೌಡ ಅವರು ಜೆಡಿಎಸ್ ಮುಖಂಡರೊಂದಿಗಿನ ಹೊಂದಾಣಿಕೆ ಹಾಗೂ ತೂಬಗೆರೆ ಹೋಬಳಿಯನ್ನು ಕಡೆಗಣಿಸುತ್ತಿರುವ ತಾರತಮ್ಯ ದೋರಣೆಯನ್ನು ಖಂಡಿಸಿ ನಾಮಪತ್ರ ಹಿಂಡೆದಿರುವುದಾಗಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.