‘ಮೊಯಿಲಿಗೆ ತಕ್ಕ ಪಾಠ ಕಲಿಸಿ’

ಶುಕ್ರವಾರ, ಏಪ್ರಿಲ್ 26, 2019
35 °C

‘ಮೊಯಿಲಿಗೆ ತಕ್ಕ ಪಾಠ ಕಲಿಸಿ’

Published:
Updated:
Prajavani

ಸೂಲಿಬೆಲೆ: ನಂದಗುಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಹೋಬಳಿ ಮಟ್ಟದ ಸಭೆ ಹಾಗೂ ರೋಡ್ ಶೋಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಎರಡು ಭಾರಿ ಆಯ್ಕೆಯಾಗಿ, ಕೇಂದ್ರದಲ್ಲಿ ಮಂತ್ರಿಯಾಗಿದ್ದ ವೀರಪ್ಪಮೊಯಿಲಿ ಎತ್ತಿನಹೊಳೆ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದು ಟೀಕಿಸಿದರು.

ರಾಜಕೀಯ ಶೋಕಿಗಾಗಿ ಚುನಾವಣೆ ಗೆದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಪೂರ್ಣ ಪ್ರಮಾಣದಲ್ಲಿ ನಿರ್ಲಕ್ಷ್ಯ ಮಾಡಿರುವ ಮೊಯಿಲಿ ಅವರಿಗೆ ಜನರು ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದ್ದು, ಇದರ ಬಗ್ಗೆ ಗಮನ ಹರಿಸದಿರುವ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದರು.

‘ಹೊಸಕೋಟೆ ಕ್ಷೇತ್ರದ 35 ವರ್ಷಗಳ ಅಧಿಕಾರದ ಅವಧಿಯಲ್ಲಿ ಯಾವುದೇ ಜಾತಿ, ಧರ್ಮಗಳ ಬೇಧ ಮಾಡದೆ ಎಲ್ಲರಿಗೂ ಸಮಾನವಾಗಿ ನ್ಯಾಯ ಒದಗಿಸಲಾಗಿದೆ. ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ಕ್ಷೇತ್ರದ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕೆಂದು’ ಕೋರಿದರು.

ತಾಲ್ಲೂಕು ಬಿಜೆಪಿ ಮುಖಂಡರಾದ ಸಿ.ಮಂಜುನಾಥ್, ಇಟ್ಟಸಂದ್ರ ಗೋಪಾಲ್, ಗಿಡ್ಡುಸರ್ದಾರ್,ರಾಜಶೇಖರ್ ಗೌಡ, ಚೇತನ್,ಸಿ.ಮುನಿಯಪ್ಪ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !