ದೊಡ್ಡಬಳ್ಳಾಪುರ: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾಯಂ ಉಪನ್ಯಾಕರೇ ಇಲ್ಲ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರನ್ನು ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುವುದಕ್ಕಿಂತ ಗಣತಿ ಸೇರಿದಂತೆ ಸರ್ಕಾರದ ಇನ್ನಿತರ ಕೆಲಸಕ್ಕೆ ನಿಯೋಜಿಸಲಾಗುತ್ತಿದೆ ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಬೇಸರ ವ್ಯಕ್ತಪಡಿಸಿದರು.

ಮಂಗಳವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಾಯಿ ಗಣತಿಗೂ ಶಿಕ್ಷಕರನ್ನು ನಿಯೋಜಿಸುವ ಚಿಂತನೆ ನಡೆದಿದೆ. ಶಿಕ್ಷಕರ ಮೇಲೆ ಇಷ್ಟು ಶೋಷಣೆ ನಡೆಯುತ್ತಿದ್ದರೂ, ಪದವೀಧರ ಶಿಕ್ಷಕರ ಪ್ರತಿನಿಧಿಗಳಾಗಿ ಪರಿಷತ್ ಪ್ರವೇಶಿಸಿದವರು ಧ್ವನಿ ಎತ್ತುತ್ತಿಲ್ಲ’ ಎಂದು ದೂರಿದರು.

ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಪಕ್ಷಕ್ಕೆ ಪಕ್ಷಾಂತರ ಮಾಡುತ್ತಾ ವಿಧಾನಪರಿಷತ್ ಪ್ರವೇಶಿಸುತ್ತಿರುವ ಪುಟ್ಟಣ್ಣ ಅವರು ಚುನಾವಣೆಗೆ ಮುನ್ನ ಶಿಕ್ಷಕ ಸಮುದಾಯಕ್ಕೆ ನೀಡಿದ್ದ ಭರವಸೆಗಳಾದ ಹಳೆಯ ಪಿಂಚಣಿ ಯೋಜನೆ, ಖಾಸಗಿ ಶಾಲೆಗಳ ಅನುಮತಿ ನವೀಕರಣ ಸರಳೀಕರಣ, ಪಿಯು ಶಿಕ್ಷಕರ ಬೇಡಿಕೆಗಳನ್ನು ಈವರೆಗೆ ಈಡೇರಿಸಿಲ್ಲ ಎಂದೂ ಹೇಳಿದರು.

ನಿವೃತ್ತ ಪ್ರಾಂಶುಪಾಲ ಪ್ರಕಾಶ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ವಕೀಲ ಅಂಜನೇಗೌಡ, ಆರ್.ಕೆಂಪರಾಜ್ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.