ದೊಡ್ಡಬಳ್ಳಾಪುರ: ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಸಾರ್ವಜನಿಕ ಪ್ರಕಟಣೆಯಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ.

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆಗೆ ಸೆ.30 ರಂದು ಪ್ರಕಟಣೆ ಹೊರಡಿಸಲಾಗಿತ್ತು. ನಮೂನೆ 19ರಲ್ಲಿ ಮತದಾರರ ಪಟ್ಟಿ ಸೇರ್ಪಡೆಗೆ ಅರ್ಜಿ ಸಲ್ಲಿಸಲು ನ.6 ಕೊನೆಯ ದಿನವಾಗಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 25 ರಿಂದ ಡಿಸೆಂಬರ್ 10 ವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ತಹಶೀಲ್ದಾರ್ ವಿಭಾವಿದ್ಯಾ ರಾಥೋಡ್ ತಿಳಿಸಿದ್ದಾರೆ.

ಡಿ.30 ರಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು

ನೋಂದಾಯಿಸಲು ಮಾನದಂಡ: ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ಸಾಮಾನ್ಯ ನಿವಾಸಿ ಆಗಿರಬೇಕು(ಈ ಕ್ಷೇತ್ರದ ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ರಾಮನಗರ ಜಿಲ್ಲೆಗಳು ಒಳಗೊಂಡಿರುತ್ತದೆ). ಅರ್ಹತಾ ದಿನಾಂಕ ಹಿಂದಿನ 6 ವರ್ಷಗಳ ಅವಧಿಯ ಪೈಕಿ ಕನಿಷ್ಟ 3 ವರ್ಷ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ ಮಾನ್ಯತೆ ಹೊಂದಿರುವ, ಮಾನ್ಯತೆ ಹೊಂದಿರುವುದಾಗಿ ಘೋಷಿಸಲ್ಪಟ್ಟಿರುವ ಸೆಕೆಂಡರಿ ಶಾಲೆಗಿಂತ ಕಡಿಮೆ ಇಲ್ಲದ ಯಾವುದೇ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ವೃತ್ತಿಯಲ್ಲಿ ಕಾರ್ಯನಿರ್ವಹಿಸಿರಬೇಕು. ಸೆಕೆಂಡರಿ ಶಾಲೆ ಅಂದರೆ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿನ ಪ್ರೌಢಶಾಲೆ ವಿಭಾಗದಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿರಬೇಕು. ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಕಾಯಂ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರಬೇಕು.

ಅರೆಕಾಲಿಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಲ್ಲಿ ನೋಂದಣಿಗೆ ಅವಕಾಶ ಇಲ್ಲ. ಅರ್ಜಿದಾರರು ಮೇಲೆ ತಿಳಿಸಿರುವ ಅವಧಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ತೊಡಗಿರುವ ಬಗ್ಗೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳಿಂದ ದೃಢೀಕೃತ ದಾಖಲೆ, ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಮತದಾರರ ಪಟ್ಟಿ ನೊಂದಣಿಗೆ ಅರ್ಜಿದಾರರ ವಾಸಸ್ಥಳವು ಅರ್ಹತೆಯಾಗಿದ್ದು, ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಯ ಸ್ಥಳವು ಪರಿಗಣಿಸಲ್ಪಡುವುದಿಲ್ಲ. ಮತದಾರರ ಪಟ್ಟಿ ಸೇರ್ಪಡೆಗೆ ಕನ್ನಡ ಅಥವಾ ಆಂಗ್ಲಭಾಷೆಯ ನಮೂನೆ-19ರಲ್ಲಿ ಅರ್ಜಿ ಸಲ್ಲಿಸಬಹುದು. ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುವುದರಿಂದ ಅರ್ಜಿದಾರರು ಇತ್ತೀಚಿಗಿನ ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೊಂದಾಯಿಸಿರುವ ಬಗ್ಗೆ ವಿಧಾನಸಭಾ ಕ್ಷೇತ್ರದ ಸಂಖ್ಯೆ ಮತ್ತು ಹೆಸರು, ಮತಗಟ್ಟೆ ಸಂಖ್ಯೆ, ಗುರುತಿನ ಚೀಟಿ (ಎಪಿಕ್) ಸಂಖ್ಯೆ, ಹುಟ್ಟಿದ ದಿನಾಂಕ, ಸಂಪರ್ಕ (ದೂರವಾಣಿ,ಮೊಬೈಲ್ ಸಂಖ್ಯೆ) ವಿವರವನ್ನು ಸಹ ಅರ್ಜಿದಾರರು ನಮೂನೆ- 19 ರೊಂದಿಗೆ ತಪ್ಪದೇ ಕಡ್ಡಾಯವಾಗಿ ಸಲ್ಲಿಸಬೇಕು.

ಭರ್ತಿ ಮಾಡಿದ ನಮೂನೆ-19ರ ಅರ್ಜಿಯನ್ನು ಪೂರಕ ಪ್ರಮಾಣಪತ್ರ, ದಾಖಲೆಗಳೊಂದಿಗೆ ತಾಲ್ಲೂಕು ಕಚೇರಿ, ಉಪವಿಭಾಗ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಗೂ ಸಲ್ಲಿಸಬಹುದಾಗಿದೆ. ಆದರೆ ಯಾವುದೇ ವ್ಯಕ್ತಿ ಒಟ್ಟಾಗಿ ಅರ್ಜಿಗಳನ್ನು ಸಲ್ಲಿಸುವಂತಿಲ್ಲ. ಆಯಾ ಶಿಕ್ಷಣ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಅರ್ಜಿಗಳನ್ನು ಪಟ್ಟಿಯೊಂದಿಗೆ ಸಲ್ಲಿಸಬಹುದು ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.