ಸೋಮವಾರ, ಸೆಪ್ಟೆಂಬರ್ 26, 2022
22 °C

ಮಕ್ಕಳಿಂದ ಶಿಕ್ಷಕರ ದಿನ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ (ಬೆಂ.ಗ್ರಾಮಾಂತರ): ಪಟ್ಟಣದ ಮೌಲಾನ ಆಜಾದ್ ಶಾಲೆಯಲ್ಲಿ ಸೋಮವಾರ ವಿದ್ಯಾರ್ಥಿಗಳು ಶಿಕ್ಷಕರ ದಿನ ಆಚರಿಸಿದರು. 

ಕವ್ವಾಲಿ ಹಾಡಿ ಶಿಕ್ಷಕರಿಗೆ ಶುಭಾಶಯ ಕೋರಿದರು. ವಿವಿಧ ಬಗೆಯ ಹಾಡುಗಳಿಗೆ ನೃತ್ಯ ಮಾಡಿ ರಂಜಿಸಿದರು. ಶಿಕ್ಷಕರ ಕುರಿತು ಮೆಚ್ಚುಗೆಯ ಮಾತುಗಳನ್ನು ಹಾಡಿದ ವಿದ್ಯಾರ್ಥಿಗಳು ತರಗತಿಯಲ್ಲಿ ಅವರು ಹೇಗೆ ಪಾಠ ಮಾಡುತ್ತಾರೆ ಎನ್ನುವುದನ್ನು ಮಿಮಿಕ್ರಿ ಮಾಡಿದರು.

ಮುಖ್ಯಶಿಕ್ಷಕಿ ಪ್ರಿಯದರ್ಶಿನಿ ಮಾತನಾಡಿ, ಸರ್ವೆಪಲ್ಲಿ ರಾಧಾಕೃಷ್ಣನ್‌ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಶಿಕ್ಷಣ, ತತ್ವಜ್ಞಾನ, ದೇಶದ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಅದಕ್ಕಾಗಿಯೇ ಅವರು ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದಾರೆ. ಅವರ ಜನ್ಮ ದಿನವಾದ ಸೆ. 5ರಂದು ಪ್ರತಿವರ್ಷ ಶಿಕ್ಷಕರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಸಹಶಿಕ್ಷಕರಾದ ಸುನೀತಾ, ಗಂಗಾಧರ್, ಭವ್ಯ, ವಿಜಯಕುಮಾರ್, ನೂರ್ ಆಯೇಷಾ, ಪರ್ಹಾನಾ ತಾಜ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.