ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವದ ಬೀಜ ಬಿತ್ತಿದ ಶಿಕ್ಷಕ
ಆನೇಕಲ್ : ತಾಲ್ಲೂಕಿನ ಚಂದಾಪುರ ಛತ್ರಖಾನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಜಿ.ರಂಗನಾಥ್ ಅವರು ಸರ್ಕಾರದಿಂದ ನೀಡುವ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಂಗನಾಥ ಅವರು ವಿಜ್ಞಾನ ಶಿಕ್ಷಕರಾಗಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಲು ಶಾಲೆಯಲ್ಲಿ ವಿವಿಧ ಚಟುವಟಿಕೆ ರೂಪಿಸಿದ್ದಾರೆ. ವಿಜ್ಞಾನ ಪ್ರಾತ್ಯಕ್ಷಿಕೆಗಳನ್ನು ತಯಾರಿಸಿ, ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಆಸಕ್ತಿ ಮೂಡಿಸಲು ಶ್ರಮಿಸಿದ್ದಾರೆ.
ವಿಜ್ಞಾನ, ಓರಿಗಾಮಿ, ಸಂವನಹನಕಾರರಾಗಿ, ಏಷ್ಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ, ಇನ್ಫೋಸಿಸ್ ಸೈನ್ಸ್ ಪೌಂಡೇಷನ್‌ನ ಉತ್ತಮ ವಿಜ್ಞಾನ ಶಿಕ್ಷಕ ಸೇರಿದಂತೆ ವಿವಿಧ ಪ್ರಶಸ್ತಿಕ್ಕೆ ಭಾಜನರಾಗಿದ್ದಾರೆ.
ಆನೇಕಲ್ ತಾಲ್ಲೂಕಿನ ಚಂದಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಸ್.ಯಶೋಧಾ, ಆನೇಕಲ್‌ನ ಡಿ.ಕೆ.ಬಾಗಿಲು ಹಿರಿಯ ಪ್ರಾಥಮಿಕ ಶಾಲೆಯ ವೈ.ಕೋಮಲಾ ಮತ್ತು ಇಂಡ್ಲವಾಡಿ ಪ್ರೌಢ ಶಾಲೆಯ ಸಹಶಿಕ್ಷಕಿ ಶೋಭಾ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ: ತಾಲ್ಲೂಕಿನ ಚಂದಾಪುರ ಛತ್ರಖಾನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಜಿ.ರಂಗನಾಥ್ ಅವರು ಸರ್ಕಾರದಿಂದ ನೀಡುವ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಂಗನಾಥ ಅವರು ವಿಜ್ಞಾನ ಶಿಕ್ಷಕರಾಗಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಲು ಶಾಲೆಯಲ್ಲಿ ವಿವಿಧ ಚಟುವಟಿಕೆ ರೂಪಿಸಿದ್ದಾರೆ. ವಿಜ್ಞಾನ ಪ್ರಾತ್ಯಕ್ಷಿಕೆಗಳನ್ನು ತಯಾರಿಸಿ, ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಆಸಕ್ತಿ ಮೂಡಿಸಲು ಶ್ರಮಿಸಿದ್ದಾರೆ.
ವಿಜ್ಞಾನ, ಓರಿಗಾಮಿ, ಸಂವನಹನಕಾರರಾಗಿ, ಏಷ್ಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ, ಇನ್ಫೋಸಿಸ್ ಸೈನ್ಸ್ ಪೌಂಡೇಷನ್‌ನ ಉತ್ತಮ ವಿಜ್ಞಾನ ಶಿಕ್ಷಕ ಸೇರಿದಂತೆ ವಿವಿಧ ಪ್ರಶಸ್ತಿಕ್ಕೆ ಭಾಜನರಾಗಿದ್ದಾರೆ.
ಆನೇಕಲ್ ತಾಲ್ಲೂಕಿನ ಚಂದಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಸ್.ಯಶೋಧಾ, ಆನೇಕಲ್‌ನ ಡಿ.ಕೆ.ಬಾಗಿಲು ಹಿರಿಯ ಪ್ರಾಥಮಿಕ ಶಾಲೆಯ ವೈ.ಕೋಮಲಾ ಮತ್ತು ಇಂಡ್ಲವಾಡಿ ಪ್ರೌಢ ಶಾಲೆಯ ಸಹಶಿಕ್ಷಕಿ ಶೋಭಾ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ
ಸರ್ಕಾರಿ ಶಾಲೆಗೆ ಹೊಸರೂಪ
ವಿಜಯಪುರ(ದೇವನಹಳ್ಳಿ): ಒಬ್ಬ ಶಿಕ್ಷಕ ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರೆ, ವಿದ್ಯಾರ್ಥಿಗಳ ವಿಕಸನದ ಜೊತೆಗೆ ಶಾಲೆಯ ವಾತಾವರಣವನ್ನೂ ಬದಲಾವಣೆ ಮಾಡಬಹುದು ಎನ್ನುವುದನ್ನು ಶಿಕ್ಷಕ ಪಿ.ಎಂ.ಕೊಟ್ರೇಶ್ ಸಾಬೀತುಪಡಿಸಿದ್ದಾರೆ.
1994ರಲ್ಲಿ ಗಣಿತ ಶಿಕ್ಷಕರಾಗಿ ವೃತ್ತಿ ಆರಂಭಿಸಿದ ಕೊಟ್ರೇಶ್ 27 ವರ್ಷ ಕರ್ತವ್ಯ ನಿರ್ವಹಿಸಿ, ಸ್ಥಳೀಯ ದಾನಿಗಳ ಸಹಕಾರದಿಂದ ಶಾಲೆಗೆ ಹೊಸರೂಪ ಕೊಟ್ಟಿದ್ದಾರೆ. ವಿದ್ಯಾರ್ಥಿಗಳ ಪ್ರಗತಿಯ ಕಡೆಗೆ ಹೆಚ್ಚು ಗಮನಹರಿಸಿದ್ದಾರೆ.
ಪ್ರಸ್ತುತ ನಾರಾಯಣಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕರಾಗಿ ಕರ್ತವ್ಯನಿರ್ವಹಿಸುತ್ತಿದ್ದು, ಅನೇಕ ದಾನಿಗಳ ಸಹಕಾರದಿಂದ ಶಾಲೆಯಲ್ಲಿ ಕಟ್ಟಡ, ಕೊಳವೆಬಾವಿ, ಗ್ರಂಥಾಲಯ, ಕಂಪ್ಯೂಟರ್ ತರಗತಿ, ರಂಗಮಂಟಪ, ಹೀಗೆ ಹಲವು ಸೌಕರ್ಯ ಕಲ್ಪಿಸುವ ಮೂಲಕ ಶಾಲೆಯಲ್ಲಿ ಕಲಿಕಾ ವಾತಾವರಣ ನಿರ್ಮಿಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿತ್ತಿದ್ದಾರೆ.
ಮುಖ್ಯಶಿಕ್ಷಕ ಪಿ.ಎಂ.ಕೊಟ್ರೇಶ್. ನಾರಾಯಣಪುರ
ಹಳೇ ವಿದ್ಯಾರ್ಥಿಗಳಿಂದ ಸಹಕಾರ ಪಡೆದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕ್ರೀಡಾಪರಿಕರ, ಟ್ರ್ಯಾಕ್ ಸೂಟ್, ಗುರುತಿನ ಚೀಟಿಗಳು, ಕಂಪ್ಯೂಟರ್ ತರಿಸಿ ವಿದ್ಯಾರ್ಥಿಗಳಿಗೆ ಕಲಿಸುತ್ತಿದ್ದಾರೆ.
ರಾಜ್ಯ ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, ಜನಮೆಚ್ಚಿದ ಶಿಕ್ಷಕ ಪ್ರಶಸ್ತಿ, ಪುರಸಭೆಯಿಂದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಟರಿಯಿಂದ ನ್ಯಾಷನಲ್ ಬಿಲ್ಡರ್ ಆವಾರ್ಡ್, ನುಡಿರತ್ನ ಪ್ರಶಸ್ತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿದೆ.
ಸರ್ಕಾರಿ ಶಾಲೆಗೆ ಹೈಟೆಕ್ ಸ್ಪರ್ಶ
ಎಂ.ಎಚ್.ಮಂಗಳಕುಮಾರಿ
ದೊಡ್ಡಬಳ್ಳಾಪುರ: ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕಿ' ಪ್ರಶಸ್ತಿಗೆ ತಾಲ್ಲೂಕಿನ ಬೀಡಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮುಖ್ಯಶಿಕ್ಷಕಿ ಎಂ.ಎಚ್.ಮಂಗಳಕುಮಾರಿ ಆಯ್ಕೆಯಾಗಿದ್ದಾರೆ.
ಸೆ.5 ರಂದು ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಮುಖ್ಯಮಂತ್ರಿಯಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಬೀಡಿಕೆರೆ ಗ್ರಾಮದಲ್ಲಿ ಶಾಲೆಗೆ ಒಂದೂವರೆ ಎಕರೆಯಷ್ಟು ವಿಶಾಲವಾದ ಜಮೀನು ಇದ್ದರೂ ಶಾಲೆ ಕೊಠಡಿ ಸೇರಿದಂತೆ ಇತರೆ ಮೂಲ ಸೌಕರ್ಯದಿಂದ ವಂಚಿತವಾಗಿತ್ತು. ಇಂತಹ ಶಾಲೆಗೆ ವಿವಿಧ ಕಂಪನಿಗಳ ಸಿಎಸ್‌ಆರ್ ಅನುದಾನದಲ್ಲಿ ಆಧುನಿಕ ಸೌಲಭ್ಯ ಒಳಗೊಂಡ ತರಗತಿಯ ಕೊಠಡಿಗಳು, ಸೋಲಾರ್ ವಿದ್ಯುತ್, ಕಂಪ್ಯೂಟರ್, ಹೈಟೆಕ್ ಶೌಚಾಲಯ ಸೇರಿದಂತೆ ಹಲವಾರು ಸೌಲಭ್ಯ ತರುವಲ್ಲಿ ಮುಖ್ಯಶಿಕ್ಷಕಿ ಎಂ.ಎಚ್. ಮಂಗಳಕುಮಾರಿ ಶ್ರಮಿಸಿದ್ದಾರೆ. ಇವರ ಕಾರ್ಯವೈಖರಿಯಿಂದ 2024ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಕಾಶ್‌ಗೆ ಜಿಲ್ಲಾ ಪ್ರಶಸ್ತಿ
ಎಚ್.ಎನ್.ಪ್ರಕಾಶ್
ನಗರದ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಎಚ್.ಎನ್.ಪ್ರಕಾಶ್ ಅವರಿಗೆ 2024ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ.
1989ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಶಿಕ್ಷಕ ವೃತ್ತಿ ಆರಂಭಿಸಿದ ಎಚ್.ಎನ್.ಪ್ರಕಾಶ್, 6 ವರ್ಷ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ, ಸಿಆರ್‌ಪಿ, ಬಿಆರ್‌ಪಿ ಕರ್ತವ್ಯ ಕುರಿತಾಗಿ ಪುಸ್ತಕ ರಚನೆ ಹಾಗೂ ಚಿಣ್ಣರ ಕರ್ನಾಟಕ ದರ್ಶನ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಶಿಕ್ಷಣ ಇಲಾಖೆ ಸೂಕ್ಷ್ಮಯೋಜನೆ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿಕಾರ್ಯ ನಿರ್ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.