ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರು ರಾಷ್ಟ್ರೀಯ ಹಬ್ಬಗಳಲ್ಲಿ ಭಾಗವಹಿಸಬೇಕು

Last Updated 3 ಆಗಸ್ಟ್ 2019, 14:00 IST
ಅಕ್ಷರ ಗಾತ್ರ

ವಿಜಯಪುರ: ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡಲು ಎಲ್ಲ ಶಾಲಾ ಕಾಲೇಜುಗಳು, ಅಧಿಕಾರಿಗಳು, ಜನರ ಸಹಕಾರ ಅಗತ್ಯವಾಗಿದೆ ಎಂದು ಪುರಸಭಾ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್ ಹೇಳಿದರು.

ಇಲ್ಲಿನ ಯೋಜ್‌ಗಾರ್ ಕಚೇರಿಯಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ರಾಷ್ಟ್ರೀಯ ಹಬ್ಬ ಆಚರಿಸಲು ಪ್ರತಿಯೊಬ್ಬರು ಬದ್ಧರಾಗಬೇಕು. ಇತ್ತೀಚೆಗೆ ರಾಷ್ಟ್ರೀಯ ಹಬ್ಬಗಳು, ರಾಷ್ಟ್ರಗೀತೆ, ರಾಷ್ಟ್ರಧ್ವಜಗಳ ಮಹತ್ವವನ್ನು ಯುವಜನರು ಮರೆಯುತ್ತಿದ್ದಾರೆ. ಅವರನ್ನು ನಾವು ಜಾಗೃತರನ್ನಾಗಿ ಮಾಡಬೇಕು’ ಎಂದು ಹೇಳಿದರು.

ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯ ದಿನಾಚರಣೆಯಲ್ಲಿ ಸರ್ಕಾರಿ ಪ್ರೌಢಶಾಲೆಯ ಮಕ್ಕಳು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಹಾಗೂ ಪಥ ಸಂಚಲನದಲ್ಲಿ ಭಾಗವಹಿಸುವ ಖಾಸಗಿ ಶಾಲೆಯ ಮಕ್ಕಳು ಹೊರತು ಪಡಿಸಿದರೆ,ಖಾಸಗಿ ಶಾಲೆಗಳು, ಕಾಲೇಜುಗಳ ಒಬ್ಬ ವಿದ್ಯಾರ್ಥಿಯೂ ಭಾಗವಹಿಸುವುದಿಲ್ಲ. ಅವರೂ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಾಗಬೇಕು ಎಂದರು.

ಬೆಳಿಗ್ಗೆ 8ಕ್ಕೆ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಜತೆ ಶಿಕ್ಷಕರು ಶಾಲಾ ಮೈದಾನಕ್ಕೆ ಬರಬೇಕು. 9ಕ್ಕೆ ಧ್ಜಜಾರೋಹಣದ ನಂತರ ವಿದ್ಯಾರ್ಥಿಗಳಿಂದ ಪಥ ಸಂಚಲನ ಮಾಡಲಾಗುವುದು. ಅತಿಥಿಗಳ ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಪುರಸಭಾ ವ್ಯವಸ್ಥಾಪಕ ಆಂಜನೇಯಲು, ಕಂದಾಯ ಅಧಿಕಾರಿ ಜಯಕಿರಣ್, ಆರೋಗ್ಯ ಎಂಜಿನಿಯರ್ ಮಹೇಶ್‌ಕುಮಾರ್, ಸಹಾಯಕ ಆರೋಗ್ಯ ಎಂಜಿನಿಯರ್ ಪ್ರಭಾವತಿ, ಸರಸ್ವತಮ್ಮ, ಮಂಜುನಾಥ್, ಜನಾರ್ಧನ್, ಮೂರ್ತಿ, ಶಿವನಾಗೇಗೌಡ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT