ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇವಾಲಯಗಳು ಸಾಮರಸ್ಯದ ಕೇಂದ್ರಗಳಾಗಲಿ’

Last Updated 7 ಸೆಪ್ಟೆಂಬರ್ 2019, 12:38 IST
ಅಕ್ಷರ ಗಾತ್ರ

ವಿಜಯಪುರ: ‘ಯುವಸಮೂಹಕ್ಕೆ ಸದ್ಧರ್ಮದ ಜಾಗೃತಿ ಮೂಡಿಸದಿದ್ದರೆ ಸಮಾಜದಲ್ಲಿ ಪರಿವರ್ತನೆ ಕಾಣಲು ಸಾಧ್ಯವಿಲ್ಲ’ ಎಂದು ಗಡ್ಡದನಾಯಕನಹಳ್ಳಿ ದುರ್ಗಾ ಮಹೇಶ್ವರಿ ದೇವಾಲಯದ ಪ್ರಧಾನ ಅರ್ಚಕ ನಾಗರಾಜಪ್ಪ ಸ್ವಾಮೀಜಿ ಹೇಳಿದರು.

ಇಲ್ಲಿನ ಗಡ್ಡದನಾಯಕನಹಳ್ಳಿ ದುರ್ಗಾಮಹೇಶ್ವರಿ ದೇವಾಲಯದಲ್ಲಿ ಶನಿವಾರ ಆಯೋಜಿಸಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ದೇವಾಲಯಗಳು ಸರ್ವಜನಾಂಗದವರಲ್ಲಿ ಸಾಮರಸ್ಯ ಮೂಡಿಸುವ ಧಾರ್ಮಿಕ ಕೇಂದ್ರಗಳಾಗಬೇಕು. ದೇವರು, ಧರ್ಮ, ಸಂಸ್ಕೃತಿ, ಪರಂಪರೆಯನ್ನು ಯುವಜನರಿಗೆ ಮನವರಿಕೆ ಮಾಡಿಕೊಡುವ ಅನಿವಾರ್ಯತೆ ಇದೆ. ಸಮಾಜದಲ್ಲಿ ಆಗುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕಾದರೆ ಯುವಸಮೂಹ ಪ್ರಜ್ಞಾವಂತರಾಗಬೇಕು’ ಎಂದರು.

‘ಈ ಉದ್ದೇಶದಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯ, ಹೋಮ, ಸರಳ ವಿವಾಹ, ಯುವಜನರಿಗೆ ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ’ ಎಂದರು.

ದೇವರಿಗೆ ಹೂವಿನ ಅಲಂಕಾರ ಮಾಡಲಾಗಿತ್ತು. ಭಕ್ತರಿಗೆ ಪ್ರಸಾದ ವಿನಿಯೋಗ ಹಾಗೂ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT