ಬನ್ನೇರುಘಟ್ಟ ಸಮೀಪ ಕಾಡಾನೆ ಸಾವು

ಆನೇಕಲ್ : ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಕಾಳೇಶ್ವರಿ ಗೇಟ್ ಬಳಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಸುಮಾರು 6-8ವರ್ಷದ ಸಲಗ ಇದಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ವೈದ್ಯರು ಮಂಗಳವಾರ ಮರಣೋತ್ತರ ಪರೀಕ್ಷೆ ನಡೆಸಿದರು. ಸಣ್ಣ ಕರುಳು ಮತ್ತು ದೊಡ್ಡ ಕರುಳು ಸೋಂಕು ಅಥವಾ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್.ಮೂರ್ತಿ ತಿಳಿಸಿದ್ದಾರೆ.
ಆನೆ ಮೃತ ದೇಹದ ಮೇಲೆ ಯಾವುದೇ ಗಾಯಗಳ ಗುರುತಾಗಲಿ ಅಥವಾ ವಿದ್ಯುತ್ ಸ್ಪರ್ಶವಾಗಿರುವ ಕುರುಹುಗಳಿಲ್ಲ. ಹಾಗಾಗಿ ಸ್ವಾಭಾವಿಕವಾಗಿ ಮೃತಪಟ್ಟಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.