ಶುಕ್ರವಾರ, ಅಕ್ಟೋಬರ್ 22, 2021
29 °C
ಗಾಂಧಿ ಜಯಂತಿ ಅಂಗವಾಗಿ ಸಸಿ ನೆಟ್ಟ ವಿದ್ಯಾರ್ಥಿಗಳು

ಆನೇಕಲ್: ನಗರೀಕರಣದಿಂದ ಕಾಡು ಕಣ್ಮರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ನಗರೀಕರಣದ ಪ್ರಭಾವದಿಂದಾಗಿ ಕಾಂಕ್ರೀಟ್‌ ಕಾಡುಗಳು ಬೆಳೆಯುತ್ತಿದ್ದು, ಹಸಿರು ಕಾಡುಗಳು ಕಣ್ಮರೆಯಾಗುತ್ತಿವೆ. ಭವಿಷ್ಯದ ದೃಷ್ಟಿಯಿಂದ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳು ನಡೆಯಬೇಕು ಎಂದು ಬೊಮ್ಮಸಂದ್ರ ಏಮ್ಸ್‌ ಐಬಿಎಸ್‌ ಕಾಲೇಜಿನ ಪ್ರಾಚಾರ್ಯ ಡಾ.ವೆಂಕಟೇಶ್‌.ಎ.ಅರಕೇರಿ ತಿಳಿಸಿದರು.

ಅವರು ತಾಲ್ಲೂಕಿನ ಬೊಮ್ಮಸಂದ್ರದ ಏಮ್ಸ್‌ ಐಬಿಎಸ್‌ ಕಾಲೇಜಿನಲ್ಲಿ ಗಾಂಧಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಕೊಡುಗೆ ನೀಡುವ ಮೂಲಕ ಇರುವ ಒಂದು ಭೂಮಿಯನ್ನು ಜತನದಿಂದ ಕಾಪಾಡಿಕೊಳ್ಳಬೇಕು. ಪರಿಸರವನ್ನು ರಕ್ಷಿಸುವ ಜವಾಬ್ದಾರಿಯಿದ್ದರೂ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ನಾಶಮಾಡುತ್ತಿದ್ದಾನೆ. ಇದರ ಪ್ರತಿಫಲವನ್ನು ಮನುಷ್ಯನೇ ಅನುಭವಿಸುತ್ತಾನೆ. ಕೊರೊನಾದಂತ ಸಂದರ್ಭಗಳಲ್ಲಿ ಹಣ ನೀಡಿ ಆಮ್ಲಜನಕ ಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ನೀರು, ಆಮ್ಲಜನಕ ಸೇರಿದಂತೆ ಹಲವಾರು ನೈಸರ್ಗಿಕ ವಸ್ತುಗಳನ್ನು ಖರೀದಿಸಬೇಕಾದ ದುಃಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ’ ಎಂದರು.

ಪರಿಸರ ಸಂರಕ್ಷಣೆ, ಸ್ವಚ್ಛತೆ ಗಾಂಧೀಜಿ ಮತ್ತು ಲಾಲ್‌ಬಹದ್ದೂರ್‌ ಶಾಸ್ತ್ರೀ ಅವರ ಜನ್ಮದಿನಾಚರಣೆ ಅಂಗವಾಗಿ ನೆಡಲಾಗಿರುವ ಗಿಡಗಳನ್ನು ವಿದ್ಯಾರ್ಥಿಗಳಿಗೆ ದತ್ತು ನೀಡಲಾಗಿದೆ. ಇವುಗಳನ್ನು ಬೆಳೆಸುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿ
ಎಂದರು.

ಕಾಲೇಜಿನ ಆನಿ ಗ್ಲೋರಿಯಾ ಜೆ.ದಾಸ್‌ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಪರಿಸರ ಕಾಳಜಿ ಕಡಿಮೆಯಾಗುತ್ತಿದ್ದು ಯುವಕರು ಪರಿಸರವನ್ನು ಕಾಪಾಡಲು ಶ್ರಮಿಸಬೇಕು. ಈ ನಿಟ್ಟಿನಲ್ಲಿ ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕ ಪ್ರದೇಶದ ಕಾರ್ಖಾನೆಗಳಿಗೆ ಗಿಡಗಳನ್ನು ನೀಡಲಾಗಿದ್ದು ಕಾರ್ಖಾನೆಗಳಲ್ಲಿ ಪರಿಸರ ಸ್ನೇಹಿ ವಾತಾವರಣ ನಿರ್ಮಿಸಲು ಸಾಧ್ಯ ಎಂದರು.

ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕಿ ಪ್ರೊ.ಅಂಬಿಕಾ ವೆಂಕಟೇಶ್‌, ಡಾ.ಚಂದ್ರಶೇಖರ್‌, ರೇಖಾ, ಸತೀಶ್, ಸೌಮ್ಯ, ಹೇಮಂತ್‌ಕುಮಾರ್, ರಮ್ಯ, ಡಾ.ರವಿಚಂದ್ರರೆಡ್ಡಿ, ಪ್ರೊ.ರೋಹಿತ್‌, ಪೃಥ್ವಿ, ಕಾವೇರಿ ಸ್ಯಾಮ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.