ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್: ಚಾಲನಕ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಲಾರಿ

ಮನೆಯ ಚಾವಣಿ, ಅಂಗಡಿ ಚಲ್ಲಾಪಿಲ್ಲ
Published 7 ಜುಲೈ 2023, 20:25 IST
Last Updated 7 ಜುಲೈ 2023, 20:25 IST
ಅಕ್ಷರ ಗಾತ್ರ

ಆನೇಕಲ್: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕದಲ್ಲಿದ್ದ ಮನೆಗೆ ನುಗ್ಗಿದ್ದರಿಂದ ರಭಸಕ್ಕೆ ಮನೆಯ ಚಾವಣಿ ಛಿದ್ರವಾಗಿರುವ ಘಟನೆ ಬನ್ನೇರುಘಟ್ಟ ಸಮೀಪದ ಬೇಗಿಹಳ್ಳಿ ಬಳಿ ಶುಕ್ರವಾರ ಸಂಜೆ ನಡೆದಿದೆ.

ಬನ್ನೇರುಘಟ್ಟದಿಂದ ಜಿಗಣಿ ಕಡೆಗೆ ಬರುತ್ತಿದ್ದ ಲಾರಿಯ ಬ್ರೇಕ್‌ ಕೈಕೊಟ್ಟಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆಯ ಪಕ್ಕದಲ್ಲಿದ್ದ ಯಲ್ಲಪ್ಪ ಎಂಬುವವರ ಮನೆಗೆ ನುಗ್ಗಿದೆ. ಲಾರಿ ನುಗ್ಗಿದ ರಭಸಕ್ಕೆ ಮನೆಯ ಮೇಲ್ಚಾವಣಿಗೆ ಹಾಕಿದ್ದ ಶೀಟ್‌ಗಳು ಮುರಿದು, ಮನೆಯಲ್ಲಿನ ಸಾಮಗ್ರಿಗಳು ಚಲ್ಲಾಪಿಲ್ಲಿಯಾಗಿವೆ. ಮನೆಯ ಪಕ್ಕದಲ್ಲೇ ಅಂಗಡಿಯಿದ್ದು, ಘಟನೆಯಿಂದಾಗಿ ಅಂಗಡಿಯಲ್ಲಿನ ಸಾಮಗ್ರಿಗಳು ಎಲ್ಲೆಂದರಲ್ಲೇ ಬಿದ್ದಿವೆ.

ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಜಖಂ ಆಗಿದೆ. ಮನೆಯಲ್ಲಿದ್ದ ಯಲ್ಲಪ್ಪ ಮತ್ತು ಹೇಮಲತಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಲಾರಿಯ ಚಾಲಕ ಜಿಗಣಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬನ್ನೇರುಘಟ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

ಲಾರಿಯೊಂದು ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ್ದರಿಂದ ಛಿದ್ರಗೊಂಡಿರುವ ಮನೆ 
ಲಾರಿಯೊಂದು ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ್ದರಿಂದ ಛಿದ್ರಗೊಂಡಿರುವ ಮನೆ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT