ಭಾನುವಾರ, ನವೆಂಬರ್ 27, 2022
20 °C

ಗಣ್ಯರಿಗೆ ಅಭಿನಂದನಾ ಸಮಾರಂಭ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರಗತಿ ಪ್ರತಿಮೆಯನ್ನು ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಿರ್ಮಾಣಕ್ಕೆ ಶ್ರಮಿಸಿದ ಗಣ್ಯರಿಗೆ ನ. 25ರಂದು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ನಾಗೇಶ್ ಹೇಳಿದರು.

ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು
ಮಾತನಾಡಿದರು.

ಕೆಂಪೇಗೌಡರು ಇಡೀ ವಿಶ್ವವೇ ತಿರುಗಿ ನೋಡುವಂತಹ ಬೆಂಗಳೂರು ನಗರವನ್ನು ನಿರ್ಮಿಸಿದರು. ಅವರ ಸಾಧನೆಗಳನ್ನು ಜಗತ್ತಿಗೆ ಪರಿಚಯಿಸುವ ಹಾಗೂ ಅವರಿಗೆ ಗೌರವ ಸಲ್ಲಿಸಲು ಪ್ರಗತಿ‌ ಪ್ರತಿಮೆ ಸ್ಥಾಪಿಸಲಾಗಿದೆ ಎಂದರು,

ಕೆಂಪೇಗೌಡರು ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಇದಕ್ಕೆ ಬೆಂಗಳೂರಿನಲ್ಲಿ ನಿರ್ಮಿಸಿರುವ ಸಮುದಾಯವಾರು ಪೇಟೆಗಳೇ ನಿದರ್ಶನವಾಗಿವೆ ಎಂದರು.

ಪ್ರತಿಮೆ ಸ್ಥಾಪನೆಗೆ ಹಗಲಿರುಳು ಶ್ರಮಿಸಿದ ಸಚಿವರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಡಾ.ಕೆ. ಸುಧಾಕರ್, ಆರ್. ಅಶೋಕ, ಎಂ.ಟಿ.ಬಿ. ನಾಗರಾಜು ಸೇರಿದಂತೆ ವಿವಿಧ ಪಕ್ಷದ ಮುಖಂಡರು ಹಾಗೂ ಅಧಿಕಾರಿಗಳಿಗೆ ಗೌರವ ಸಲ್ಲಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಶಾಖಾ ಮಠದ ಮಂಗಳನಾಥ ಸ್ವಾಮೀಜಿ, ಪುಷ್ಪಾಂಡಜ ಮಹರ್ಷಿ ಆಶ್ರಮದ ದಿವ್ಯಜ್ಞಾನಾನಂದಗಿರಿ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ನಗರಸಭೆ ಸದಸ್ಯರಾದ ಬಂತಿ ವೆಂಕಟೇಶ್, ಪದ್ಮನಾಭ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನಿರ್ದೇಶಕ ಎನ್.ಕೆ. ರಮೇಶ್, ಆನಂದಮೂರ್ತಿ, ಮುಖಂಡರಾದ ಕೆ.ಬಿ. ಮುದ್ದಪ್ಪ, ಪ್ರಸನ್ನ, ವೆಂಕಟರಾಜು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು