ಶುಕ್ರವಾರ, ಡಿಸೆಂಬರ್ 4, 2020
21 °C

ವಿದ್ಯಾರ್ಥಿಗಳ ಸಂಖ್ಯೆ ವಿರಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್ : ಪಟ್ಟಣದ ಡಾ.ಎಸ್‌.ಗೋಪಾಲರಾಜು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೊರೊನಾ ನಂತರ ಮಂಗಳವಾರ ಅಂತಿಮ ವರ್ಷದ ಪದವಿ ತರಗತಿಗಳು ಪ್ರಾರಂಭವಾದವು.

ಕಾಲೇಜಿನಲ್ಲಿ ಬಿ.ಎ ಮತ್ತು ಬಿಕಾಂ ಪದವಿ ತರಗತಿಗಳಲ್ಲಿ ಅಂತಿಮ ವರ್ಷದಲ್ಲಿ 120 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪ್ರಾರಂಭವಾದ ತರಗತಿಗಳಿಗೆ ಕೇವಲ 9ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಪೋಷಕರ ಒಪ್ಪಿಗೆ ಪತ್ರದೊಂದಿಗೆ ಬಂದ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಸ್ವಾಬ್‌ ಟೆಸ್ಟ್‌ ಮಾಡಿ ತರಗತಿಗೆ ಹೋಗಲು ಅವಕಾಶ ಮಾಡಿಕೊಟ್ಟರು.

ಕಾಲೇಜಿನ ಉಪನ್ಯಾಸಕ ಡಾ.ಚಿದಾನಂದ್‌ ಮಾಹಿತಿ ನೀಡಿ, ಪುರಸಭೆಗೆ ಕಾಲೇಜು ವತಿಯಿಂದ ಮನವಿ ಪತ್ರ ಸಲ್ಲಿಸಲಾಗಿತ್ತು. ಅದರಂತೆ ಎಲ್ಲ ಕೊಠಡಿಗಳು ಮತ್ತು ಆವರಣ ಸ್ಯಾನಿಟೈಸ್‌ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಅಂತರ ಕಾಯ್ದುಕೊಳ್ಳಲು ಮತ್ತು ಮಾಸ್ಕ್‌ ಧರಿಸಲು ಸೂಚನೆ ನೀಡಲಾಗಿದೆ ಎಂದರು.

ಕಾಲೇಜುಗಳು ಕಳೆದ ಆರೇಳು ತಿಂಗಳಿನಿಂದ ವಿದ್ಯಾರ್ಥಿಗಳಿಲ್ಲದೆ ಬಿಕೊ ಎನ್ನುತ್ತಿದ್ದವು. ಕಾಲೇಜಿನ ಆವರಣದಲ್ಲಿ ಸ್ವಚ್ಛತೆ ಕೊರತೆ ಎದ್ದುಕಾಣುತ್ತಿತ್ತು.

ವಿಶ್ವಚೇತನ ಪದವಿ ಕಾಲೇಜಿನಲ್ಲಿ ಪದವಿ ಅಂತಿಮ ವರ್ಷದಲ್ಲಿ 318 ವಿದ್ಯಾರ್ಥಿಗಳಿದ್ದು 8 ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದರು ಎಂದು ಕಾಲೇಜಿನ ಪ್ರಾಚಾರ್ಯ ಟಿ.ಪ್ರಕಾಶ್‌ರೆಡ್ಡಿ ತಿಳಿಸಿದರು.

ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಮತ್ತು ಬೋಧನಾ ಸಿಬ್ಬಂದಿ ಹಾಗೂ ಬೋದನೇತರ ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಗಾಗಬೇಕಾಗಿದೆ. ಕೊರೊನಾ ತಪಾಸಣೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಮುಂದಿನ ದಿನಗಳಲ್ಲಿ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು