ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾರ್ಮಿಕರಿಗೆ ನ್ಯಾಯ ಕಲ್ಪಿಸಲು ಬದ್ಧ’

Last Updated 20 ಅಕ್ಟೋಬರ್ 2020, 3:09 IST
ಅಕ್ಷರ ಗಾತ್ರ

ಹೊಸಕೋಟೆ: ‘ರಾಜ್ಯದ ಕೂಲಿ ಕಾರ್ಮಿಕರು, ರೈತರು ಹಾಗೂ ದುಡಿಯುವ ವರ್ಗಕ್ಕೆ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಕರ್ನಾಟಕ ಕಾರ್ಮಿಕ ವೇದಿಕೆಯ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಎಚ್.ಟಿ. ವೆಂಕಟೇಶ್ ಭರವಸೆ ನೀಡಿದರು.

ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ ಗ್ರಾಮಾಂತರ ಜಿಲ್ಲೆಯ ಕರ್ನಾಟಕ ಕಾರ್ಮಿಕ ವೇದಿಕೆಯ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣಾ ಕಾರ್ಯಕ್ರಮ
ದಲ್ಲಿ ಅವರು ಮಾತನಾಡಿದರು.

‘ರಾಜ್ಯದಾದ್ಯಂತ ಪ್ರವಾಸ ಮಾಡಿ ಸಂಘಟನೆಯನ್ನು ಬಲಪಡಿಸ
ಲಾಗುವುದು. ಜೊತೆಗೆ, ದುಡಿಯುವ ವರ್ಗಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಸಂಘಟನೆಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಪ್ರತಿಯೊಬ್ಬರಿಗೂ ಜವಾಬ್ದಾರಿ ನೀಡಿ ಸಂಘಟನೆಯ ಸಂಸ್ಥಾಪಕ ಚಳವಳಿ ನಾಗೇಶ್ ಅವರ ಆಶಯಗಳನ್ನು ಈಡೇರಿಸಲಾಗುವುದು’ ಎಂದು ತಿಳಿಸಿದರು.

ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಡಾ.ರವಿ ಶೆಟ್ಟಿ ಬೈಂದೂರ್ ಮಾತನಾಡಿ, ‘ಚಳವಳಿ ನಾಗೇಶ್ ಅವರು ಈ ಸಂಘಟನೆ ಸ್ಥಾಪಿಸುವ ಮೂಲಕ ರಾಜ್ಯದಲ್ಲಿ ನೆಲ, ಜಲ ಹಾಗೂ ಕಾರ್ಮಿಕರ ಪರ ಧ್ವನಿ ಎತ್ತಿದ್ದಾರೆ. ಅವರ ಮಾರ್ಗದರ್ಶನದಡಿ ಇಂದಿಗೂ ಸಂಘಟನೆಯು ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ದುಡಿಯುವ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚಳವಳಿ ನಡೆಸಲಾಗುವುದು. ನ್ಯಾಯ ಸಮ್ಮತವಾಗಿ ದುಡಿಯುವ ಜನರಿಗೆ ಸೂಕ್ತ ಭದ್ರತೆ ಇಲ್ಲದಂತಾಗಿದೆ. ಕೊರೊನಾದಿಂದ ಲಕ್ಷಾಂತರ ಕಾರ್ಮಿಕರು ಕೆಲಸವಿಲ್ಲದೆ ಜೀವನ ನಡೆಸುವುದೇ ಕಷ್ಟಕರವಾಗಿದೆ. ಸರ್ಕಾರ ಕೇವಲ ದಿನಸಿ ವಿತರಣೆ ಮಾಡಿ ಜವಾಬ್ದಾರಿಯಿಂದ ಹಿಂದೆ ಸರಿದಿದೆ ಎಂದು ದೂರಿದರು.

ಹೊಸಕೋಟೆಯ ಎಚ್.ಟಿ. ವೆಂಕಟೇಶ್ ಅವರಿಗೆ ರವಿ ಶೆಟ್ಟಿ ಬೈಂದೂರ್‌ ಅವರು ರಾಜ್ಯ ಕಾರ್ಯಾಧ್ಯಕ್ಷ ಸ್ಥಾನದ ಆದೇಶ ಪತ್ರ ನೀಡಿದರು. ಹೊಸಕೋಟೆ ನಗರ ಘಟಕದ ಅಧ್ಯಕ್ಷ ರಾಮಚಂದ್ರ, ಉಪಾಧ್ಯಕ್ಷ ಎಚ್.ಆರ್‌. ಪ್ರಭಾಕರ್‌, ಗೌರವಾಧ್ಯಕ್ಷ ಗಂಗಾಧರ್‌, ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಪ್ರೇಮಾ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವೇದಿಕೆಯ ರಾಜ್ಯ ಕಾರ್ಯದರ್ಶಿ ಅನಂತು, ಅಖಿಲ ಕರ್ನಾಟಕ ಮಹಿಳಾ ಅಭಿವೃದ್ಧಿ ಸಂಸ್ಥೆಯ ರಾಜ್ಯ ಅಧ್ಯಕ್ಷೆ ಎನ್. ಶ್ರೀಲಕ್ಷ್ಮಿ, ಪೂಜಾ ಶೆಟ್ಟಿ, ಅಖಿಲ್‌ ಕುಮಾರ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT