ಬುಧವಾರ, ಜೂನ್ 29, 2022
24 °C

ಆನೇಕಲ್: ಮದಗದಮ್ಮ ದೇಗುಲದ ಜೀರ್ಣೋದ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ತಾಲ್ಲೂಕಿನ ಅತ್ತಿಬೆಲೆಯಲ್ಲಿ ಮದಗದಮ್ಮ ದೇವಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು.

ದೇಗುಲದ ಜೀರ್ಣೋದ್ಧಾರದ ಅಂಗವಾಗಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ನೂರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.

ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಗೋಪೂಜೆ, ಗಣಪತಿ ಹೋಮ, ವಾಸ್ತುಹೋಮ, ಮೂರ್ತಿ ಹೋಮ, ಮೃತ್ಯುಂಜಯ ಹೋಮ, ಪರಿವಾರ ದೇವತಾ ಹೋಮ ಸೇರಿದಂತೆ ಹಲವಾರು ಧಾರ್ಮಿಕ ಆಚರಣೆಗಳನ್ನು ನಡೆಸಲಾಯಿತು.

ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಚಿತ್ರದುರ್ಗ ಮಠದ ಬಸವ ಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ರಾಜಾಪುರ ಮಠದ ಡಾ.ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಕೆ.ಎಚ್‌. ಮುನಿಯಪ್ಪ, ಪಾಂಡಿಚೇರಿ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಸಾಯಿಸರವಣ ಕುಮಾರ್‌, ಎಸ್‌.ಸಿ, ಎಸ್‌.ಟಿ ಆಯೋಗದ ಮಾಜಿ ಅಧ್ಯಕ್ಷ ಎ. ಮುನಿಯಪ್ಪ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ. ಶಂಕರಪ್ಪ, ಮುಖಂಡರಾದ ಟಿ.ವಿ. ಬಾಬು, ಕೆ.ವಿ. ಶಿವಪ್ಪ, ಪುರಸಭಾ ಅಧ್ಯಕ್ಷೆ ಚಂದನಾ ಮಿಲನ್‌ಕುಮಾರ್‌, ಸದಸ್ಯರಾದ ನಾರಾಯಣಸ್ವಾಮಿ, ಮುನಿರಾಜು, ಮಣಿ, ಡಿ.ಎಂ. ಮುನಿಯಪ್ಪ, ರಾಜಶೇಖರ್‌, ಆನಂದಪ್ಪ, ರಾಮಚಂದ್ರ, ಎ.ಎನ್‌. ಶೇಖರ್, ಶಶಿಧರ್, ಚಂದ್ರಶೇಖರ್‌, ದೇವರಾಜು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು