ಗುರುವಾರ , ಡಿಸೆಂಬರ್ 12, 2019
17 °C

ಗೆದ್ದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳುವೆ: ಶರತ್‌ ಬಚ್ಚೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ತಮ್ಮನ್ನು ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಸ್ಥಾನದಿಂದ ಉಚ್ಚಾಟಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷೇತರ ಅಭ್ಯರ್ಥಿ ಶರತ್‌ ಬಚ್ಚೇಗೌಡ ರಾಜಕೀಯವಾಗಿ ಬೆಳೆಯಲು ಅವಕಾಶ ಮಾಡಿಕೊಟ್ಟ ಪಕ್ಷದ ಹಿರಿಯ ಪದಾಧಿಕಾರಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

‘ಬಿಜೆಪಿಯ ಈ ನಿರ್ಧಾರವನ್ನು ಭಾರವಾದ ಹೃದಯದಿಂದ ಸ್ವೀಕರಿಸಿದ್ದೇನೆ. ನಾವೇ ಕಟ್ಟಿ ಬೆಳೆಸಿದ ಪಕ್ಷದಲ್ಲಿ ನಮಗೆ ಸ್ಥಾನವಿಲ್ಲ ಎಂದಾಗ ‌ನೋವಾಗುತ್ತಿದೆ ಎಂದ ಅವರು, ಜನರ ಜತೆಯಲ್ಲಿ ಉಳಿಯಲು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದು ಗೆದ್ದು ಬಂದರೆ ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ’ ತಿಳಿಸಿದರು.

 

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು