ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳ್ಳತನ ಪ್ರಕರಣದಲ್ಲಿ ಮಹಿಳೆಯ ಬಂಧನ

Last Updated 7 ಫೆಬ್ರುವರಿ 2020, 14:20 IST
ಅಕ್ಷರ ಗಾತ್ರ

ವಿಜಯಪುರ: ಮಾಲೀಕರ ಮನೆಯಲ್ಲಿ ಚಿನ್ನಾಭರಣಗಳು ಕದ್ದ ಆರೋಪದ ಮೇಲೆ ಸವಿತಾ ಎಂಬಾಕೆಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

ಇಲ್ಲಿನ ಧರ್ಮರಾಯಸ್ವಾಮಿ ದೇವಾಲಯದ ಮುಂಭಾಗದಲ್ಲಿ ಸವಿತಾ ಮನೆ ಬಾಡಿಗೆಗೆ ಪಡೆದುಕೊಂಡಿದ್ದರು. ಮನೆಯ ಮಾಲೀಕರಾದ ನಾಗವೇಣಿ ಎಂಬುವವರು ತರಕಾರಿ ವ್ಯಾಪಾರಕ್ಕೆಂದು ಹೋಗಿದ್ದಾಗ ತನ್ನ ಬಳಿಯಿದ್ದ ಮತ್ತೊಂದು ಕೀಲಿ ಬಳಸಿಕೊಂಡು, ಮಾಲೀಕರ ಮನೆಯಲ್ಲಿ ಕಳವು ಮಾಡಿ ಧರ್ಮಸ್ಥಳಕ್ಕೆ ಹೋಗಿ ಬರುವುದಾಗಿ ಹೇಳಿ ಹೊರಟಿದ್ದಳು.

ಸವಿತಾ ವಾಪಸ್‌ ಬಾರದಿದ್ದಾಗ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ನಾಗವೇಣಿ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಫೆ. 5 ರಂದು ದೇವನಹಳ್ಳಿಯ ಬಸ್ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದೆವು. ಆಕೆಯನ್ನು ವಿಚಾರಣೆ ನಡೆಸಿದಾಗ ಇಲ್ಲಿ ಕಳ್ಳತನವಾಗಿರುವ ಚಿನ್ನಾಭರಣವೂ ಸೇರಿದಂತೆ 120 ಗ್ರಾಂ ನಷ್ಟು ಚಿನ್ನಾಭರಣ ಪತ್ತೆಯಾಗಿದೆ. ಆಕೆಯಿಂದ 12 ಸಾವಿರ ನಗದು, ಮೊಬೈಲ್, ವಶಪಡಿಸಿಕೊಂಡು, ಆಕೆಯನ್ನು ದೇವನಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಸರ್ಕಲ್ ಇನ್‌ಸ್ಪೆಕ್ಟರ್‌ ಎಸ್.ಮಲ್ಲಿಕಾರ್ಜುನ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT