ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್: ರುಪ್ಸಾ ಪ್ರತಿಭಟನೆಗೆ ಬೆಂಬಲವಿಲ್ಲ

ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಡಿ.ಮುನಿರಾಜು ಹೇಳಿಕೆ
Last Updated 6 ಜನವರಿ 2021, 4:44 IST
ಅಕ್ಷರ ಗಾತ್ರ

ಆನೇಕಲ್: ಖಾಸಗಿ ಅನುದಾನ ರಹಿತ ಶಾಲೆಗಳ ಸಂಘ ಜನವರಿ 6ರಿಂದ ಕರೆ ನೀಡಿರುವ ಪ್ರತಿಭಟನೆಗೆ ತಾಲ್ಲೂಕಿನ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಬೆಂಬಲ ನೀಡುವುದಿಲ್ಲ. ಸರ್ಕಾರ ಸೂಚಿಸಿ
ರುವ ಮಾರ್ಗಸೂಚಿಯಂತೆ ಶಾಲೆಗಳನ್ನು ನಡೆಸಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ಡಿ.ಮುನಿರಾಜು ತಿಳಿಸಿದರು.

ಅವರು ತಾಲ್ಲೂಕಿನ ಅತ್ತಿಬೆಲೆಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರುಪ್ಸಾ ಸಂಘಟನೆ ಕೇವಲ ಎರಡು ತಿಂಗಳುಗಳ ಸಂಘಟನೆಯಾಗಿದೆ. ಇವರಿಗೆ ಇಲಾಖೆ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅರಿವಿಲ್ಲ. ಪ್ರಚಾರಕ್ಕಾಗಿ ಪತ್ರಿಕಾ ಹೇಳಿಕೆ ನೀಡುತ್ತಿದೆ. ಆದರೆ, ಶಾಲೆ ತೆರೆಯಬೇಕಾಗಿರುವುದು ಎಲ್ಲರ ಜವಾಬ್ದಾರಿಯಾಗಿದೆ. ಸರ್ಕಾರದ ಸೂಚನೆ
ಗಳನ್ನು ಪಾಲಿಸಿ ಯಾವುದೇ ರೀತಿಯ ಆತಂಕವಿಲ್ಲದೆ ಸುರಕ್ಷತಾ ಕ್ರಮ ಕೈಗೊಂಡು ಶಾಲೆಗಳನ್ನು ನಡೆಸ
ಬೇಕಾಗಿದೆ. ಇಲ್ಲವಾದ್ದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ತೀವ್ರ ಸಮಸ್ಯೆ ಎದುರಾಗಲಿದೆ ಎಂದರು.

ಸುಮಾರು ಒಂಭತ್ತು ತಿಂಗಳು ಶಾಲೆಗಳನ್ನು ಮುಚ್ಚಲಾಗಿದೆ. ತಾಲ್ಲೂಕಿನಲ್ಲಿ ಅನುದಾನ ರಹಿತ ಶಾಲೆ
ಗಳ ಒಕ್ಕೂಟ ಸರ್ಕಾರದ ಎಸ್‌ಓಪಿಯಂತೆ ಶಾಲೆಗಳನ್ನು ಪ್ರಾರಂಭಿಸಲು ಮುಂದಾಗಿದೆ. ಯಥಾಸ್ಥಿತಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ಪ್ರತಿಭಟನೆ ಮಾಡುವ ತೀರ್ಮಾನ ಕೈಗೊಂಡಿರುವ ರುಪ್ಸಾ ಸಂಘಟನೆಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡುವುದಿಲ್ಲ. ಶಾಲೆಗಳು ಯಥಾಸ್ಥಿತಿಯಲ್ಲಿ ನಡೆಯಲಿವೆ ಎಂದು ತಿಳಿಸಿದರು. ಒಕ್ಕೂಟದ ಪದಾಧಿಕಾರಿ ರವಿಕುಮಾರ್‌ ಮಾತನಾಡಿ, ಸರ್ಕಾರ ಸೂಚಿಸಿರುವ ಶುಲ್ಕಕ್ಕಿಂತ ಶೇ30ರಷ್ಟು ಕಡಿತ ಮಾಡಿ ಮತ್ತು ಕಂತುಗಳಲ್ಲಿ ಶುಲ್ಕ ಪಾವತಿಸಲು ಅನುಕೂಲ ಕಲ್ಪಿಸಲಾಗಿದೆ. ಶಿಕ್ಷಕರ ಮೂಲಕ ಆನ್‌ಲೈನ್‌ ತರಗತಿಗಳನ್ನು ನಡೆಸಿಕೊಂಡು ಶೈಕ್ಷಣಿಕ ಚಟುವಟಿಕೆ ನಡೆಸಲಾಗಿದೆ. ಪ್ರಸ್ತುತ ಹಳಿಗೆ ಮರಳುತ್ತಿರುವ ಶೈಕ್ಷಣಿಕ ಚಟುವಟಿಕೆಗಳನ್ನು ಹಳಿ ತಪ್ಪಿಸಲು ಅವಕಾಶ ನೀಡಬಾರದು. ಸರ್ಕಾರದ ಜತೆಗೆ ಬೇಡಿಕೆಗಳನ್ನು ಚರ್ಚಿಸುವುದರ ಜತೆಗೆ ಶಾಲೆಗಳನ್ನು ನಿರಂತರವಾಗಿ ನಡೆಸಲು ತಾಲ್ಲೂಕಿನಲ್ಲಿ ಖಾಸಗಿ ಶಾಲೆಗಳ ಒಕ್ಕೂಟ ತೀರ್ಮಾನ ಕೈಗೊಂಡಿದೆ ಎಂದರು.

ಪದಾಧಿಕಾರಿಗಳಾದ ಬಿ.ಎಸ್‌.ಶೇಖರ್, ಜ್ಯೋತಿಗೌಡ, ಸುರೇಶ್, ಕಿಶೋರ್‌ ಶರ್ಮಾ, ವಿನಯ್‌, ವಿಜಯ
ಕುಮಾರ್‌, ರಾಹುಲ್‌, ಥಾಮಸ್‌, ರಾಜೇಶ್‌ ನಾಯ್ಕ್, ಕಾಳಿರಾಜು, ಲಕ್ಷ್ಮಣ್‌, ಚಂದ್ರಯ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT