ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾನೆಲ್‌ ಮುಖ್ಯಸ್ಥರಿಗೆ ಬೆದರಿಕೆ: ಗೃಹಮಂತ್ರಿಗೆ ಪತ್ರ

Last Updated 7 ಸೆಪ್ಟೆಂಬರ್ 2020, 13:31 IST
ಅಕ್ಷರ ಗಾತ್ರ

ವಿಜಯಪುರ: ಜೀ ಕನ್ನಡ ವಾಹಿನಿಯ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಒತ್ತಡ ಹೇರುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತು ಗೃಹ ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ಕರ್ನಾಟಕ ದಲಿತ ಜನ ಸೇನೆ ರಾಜ್ಯ ಘಟಕದ ಅಧ್ಯಕ್ಷ ಟಿ.ಭರತ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಡಾ.ಬಿ.ಆರ್.ಅಂಬೇಡ್ಕರ್ ರವರ ಜೀವನ ಚರಿತ್ರೆ ಮಹಾನಾಯಕ ಎಂಬ ಧಾರಾವಾಹಿಯನ್ನು ಪ್ರಸಾರ ಮಾಡುತ್ತಿರುವವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಅಂಬೇಡ್ಕರ್ ಅವರು ಅನುಭವಿಸಿದ ಶೋಷಣೆ, ದಬ್ಬಾಳಿಕೆ, ದೌಜ೯ನ್ಯ, ಅಸ್ಪೃಶ್ಯತೆ, ಅಸಮಾನತೆಯನ್ನು ತೋರಿಸುತ್ತಿರುವುದನ್ನು ಸಹಿಸದ ಭಟ್ಟಭದ್ರ ಹಿತಾಸಕ್ತಿಗಳು ಜೀವ ಬೆದರಿಕೆ ಹಾಕುತ್ತಿರುವುದು ಖಂಡನೀಯ. ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌಜ೯ನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಕಾ೯ರ ಪೂರ್ಣಪ್ರಮಾಣದಲ್ಲಿ ದಲಿತರಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT