ಬುಧವಾರ, ಆಗಸ್ಟ್ 4, 2021
26 °C

ಮೂವರಲ್ಲಿ ಸೋಂಕು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೆ ಮೂವರು ಮಹಿಳೆಯರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದ್ದಾರೆ.

ಮೂವರು ಸೋಂಕಿತರು ಸೋಂಕಿತ ವ್ಯಕ್ತಿಗಳ ಪ್ರಥಮ ಸಂಪರ್ಕ ಹೊಂದಿದವರಾಗಿದ್ದಾರೆ. ಹೊಸಕೋಟೆ ತಾಲ್ಲೂಕಿನ ಚಿಕ್ಕಕೊರಟ್ಟಿ ಗ್ರಾಮದ ನಿವಾಸಿ (ರೋಗಿ ಸಂಖ್ಯೆ–3462) 36 ವರ್ಷ ಮಹಿಳೆಯ ಆರೋಗ್ಯ ತಪಾಸಣೆ ನಡೆಸಿದಾಗ ಸೋಂಕು ದೃಢಪಟ್ಟಿದೆ. ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿ ಇಲತೊರೆ ಗ್ರಾಮದ 29 ವರ್ಷ (ರೋಗಿ ಸಂಖ್ಯೆ 3463) ಮತ್ತು 58 ವರ್ಷ (ರೋಗಿ ಸಂಖ್ಯೆ 3464) ಈ ಇಬ್ಬರು ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದ್ದು (ರೋಗಿ ಸಂಖ್ಯೆ 2550)ರ ಸಂಪರ್ಕ ಹೊಂದಿದ್ದವರಾಗಿದ್ದಾರೆ. ಸೋಂಕಿತರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.