ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಕೆರೆಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು

Published 18 ಜೂನ್ 2023, 8:31 IST
Last Updated 18 ಜೂನ್ 2023, 8:31 IST
ಅಕ್ಷರ ಗಾತ್ರ

ವಿಜಯಪುರ (ದೇವನಹಳ್ಳಿ): ಚಿಕ್ಕನಹಳ್ಳಿ ಸಮೀಪದ ಅಮಾನಿಕೆರೆಯಲ್ಲಿ ಶನಿವಾರ ಈಜಲು ಹೋಗಿದ್ದ ಮೂರು ಮಂದಿ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಪಟ್ಟಣದ ಕೆರೆಕೋಡಿ ರಸ್ತೆ ಹಾಗೂ ಶಿಡ್ಲಘಟ್ಟ ರಸ್ತೆಯಲ್ಲಿ ವಾಸವಾಗಿದ್ದ ಕಾರ್ತಿಕ್ (15), ಗುರುಪ್ರಸಾದ್ (16), ಧನುಷ್ (10), ಮೃತ ವಿದ್ಯಾರ್ಥಿಗಳು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಓದುತ್ತಿದ್ದರು.

ಶನಿವಾರ ಶಾಲೆ ಮುಗಿಸಿಕೊಂಡು ಮನೆಗೆ ಬಂದು ಬ್ಯಾಗ್ ಗಳನ್ನು ಮನೆಯಲ್ಲಿಟ್ಟು, ಸೈಕಲ್ ಗಳಲ್ಲಿ ಹೊರಗೆ ಹೋದವರು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಮಕ್ಕಳು ಬಾರದೆ ಇರುವುದನ್ನು ಗಮನಿಸಿದ ಪೋಷಕರು ಎಲ್ಲ ಕಡೆ ಹುಡುಕಾಡಿ, ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಭಾನುವಾರ ಬೆಳಿಗ್ಗೆ ಕೆರೆಯಲ್ಲಿ ಸೈಕಲ್ ಗಳು ಪತ್ತೆಯಾಗಿದ್ದು, ನೀರಿನಲ್ಲಿ ಮೃತದೇಹಗಳು ಪತ್ತೆಯಾಗಿವೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಸಹಾಯದೊಂದಿಗೆ ಮೂರು ಮಕ್ಕಳ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ವಿಜಯಪುರ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ನಾಗರಾಜ್ ತಿಳಿಸಿದ್ದಾರೆ.

ಸ್ಥಳಕ್ಕೆ ಬಂದಿದ್ದ ಮೃತ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಕಾರ್ತಿಕ್, ಗುರುಪ್ರಸಾದ್, ಧನುಷ್
ಕಾರ್ತಿಕ್, ಗುರುಪ್ರಸಾದ್, ಧನುಷ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT