ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಸಾಲ ಯೋಜನೆಯಡಿ ₹ 3 ಸಾವಿರ ಕೋಟಿ ಬಿಡುಗಡೆ

Last Updated 8 ಜೂನ್ 2020, 14:53 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಗ್ರಾಮಾಂತರ ಜಿಲ್ಲೆ 2020–21ನೇ ಸಾಲಿನಲ್ಲಿ ₹ 3 ಸಾವಿರ ಕೋಟಿ ಸಾಲ ಯೋಜನೆಯಡಿ ಬಿಡುಗಡೆಗೊಳಿಸಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ ಹೇಳಿದರು.

ಇಲ್ಲಿನಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕೆನರಾ ಬ್ಯಾಂಕ್ ಹಾಗೂ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಭಿವೃದ್ಧಿ (ನಬಾರ್ಡ್) ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ‘2020–21ನೇ ಸಾಲಿನ ಜಿಲ್ಲಾ ಸಾಲ ಯೋಜನೆ ಸ್ಥಳೀಯ ಅಸ್ತಿತ್ವದಲ್ಲಿರುವ ಸಂಪನ್ಮೂಲಗಳ ಆಧಾರದ ಮೇಲೆ ಭೌತಿಕ ಸಾಮರ್ಥ್ಯಕ್ಕೆ ಅನುಗುಣ ದೀರ್ಘ ಕಾಲಾವಧಿ ಲಭ್ಯತೆಗೆ ಪೂರಕವಾಗುವಂತೆ ಒಟ್ಟು ₹3000 ಕೋಟಿ ರೂಪಾಯಿ ನಿಗದಿಗೊಳಿಸಲಾಗಿದೆ. ಆದ್ಯತಾ ವಲಯಕ್ಕೆ ₹2,700 ಕೋಟಿ ಮೀಸಲಿಡಲಾಗಿದೆ’ ಎಂದು ಹೇಳಿದರು.

‘ಆದ್ಯತಾ ವಲಯದಲ್ಲಿ ₹1,685 ಕೋಟಿ ಕೃಷಿ ಕ್ಷೇತ್ರಕ್ಕೆ ಕಾಯ್ದಿರಿಸಲಾಗಿದೆ. ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ₹ 457 ಕೋಟಿ ನಿಗದಿಗೊಳಿಸಲಾಗಿದೆ. ಸ್ಥಳೀಯ ಸಂಪನ್ಮೂಲದ ಸಾಮರ್ಥ್ಯಕ್ಕೆ ಅನುಗುಣವಾಗಿ 2020–21ರ ಜಿಲ್ಲಾ ಸಾಲ ಯೋಜನೆಯು ಮುಖ್ಯ ಆದ್ಯತಾ ವಲಯಗಳಿಗೆ ನೆರವು ನೀಡುವುದರೊಂದಿಗೆ ಎಲ್ಲ ವರ್ಗಗಳ ಫಲಾನುಭವಿಗಳಿಗೆ ಸೂಕ್ತ ರೀತಿ ಆರ್ಥಿಕ ನೆರವು ಒದಗಿಸಲು ಸಹಕಾರಿಯಾಗಲಿದೆ’ ಎಂದು ತಿಳಿಸಿದರು.

ಕೆನರಾ ಬ್ಯಾಂಕ್ ವ್ಯವಸ್ಥಾಪಕ ಎಂ.ಸಿ.ಮಧುಸೂದನ, ಕೆನರಾ ಬ್ಯಾಂಕ್‌ನ ಸಹಾಯಕ ಮಹಾಪ್ರಬಂಧಕ ಎನ್.ಶ್ರೀನಿವಾಸರಾವ್, ನಬಾರ್ಡ್‌ನ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಮನೋಹರರೆಡ್ಡಿ, ಎಸ್‌ಬಿಐ ಬ್ಯಾಂಕ್‌ನ ವಿಭಾಗೀಯ ವ್ಯವಸ್ಥಾಪಕ ಮಹದೇವಸ್ವಾಮಿ, ಗ್ರಾಮಾಂತರ ಜಿಲ್ಲೆಯ ಎಲ್ಲ ಬ್ಯಾಂಕಿನ ಮುಖ್ಯಸ್ಥರು, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT