ದರೋಡೆಕೋರರಿಗೆ ಗುಂಡೇಟು

7

ದರೋಡೆಕೋರರಿಗೆ ಗುಂಡೇಟು

Published:
Updated:

ದೇವನಹಳ್ಳಿ: ಬಂಧಿಸಲು ಹೋದ ಪೊಲೀಸರ ಮೇಲೆ ದರೋಡೆಕೋರರು ಕಲ್ಲು ತೂರಿದ ಪರಿಣಾಮ ಪೊಲೀಸರು ಗುಂಡು ಹಾರಿಸಿದ ಘಟನೆ ಬುಧವಾರ ರಾತ್ರಿ ಬೊಮ್ಮವಾರ ನೀಲಗಿರಿ ತೋಪಿನಲ್ಲಿ ನಡೆದಿದೆ.

ಘಟನೆಯಲ್ಲಿ ಗಾಯಗೊಂಡಿರುವ ಉದಯಕುಮಾರ್ ಮತ್ತು ಪವನ್ ಬೆಂಗಳೂರು ನಗರದ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಅನೇಕ ಬಡಾವಣೆಗಳಲ್ಲಿ ಗ್ಯಾಂಗ್ ಕಟ್ಟಿಕೊಂಡು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ದರೋಡೆ ಮಾಡುತ್ತಿದ್ದರು ಎನ್ನಲಾಗಿದೆ.

ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. ಮಾಹಿತಿ ಮೇರೆಗೆ ಆರೋಪಿಗಳನ್ನು ಹಿಂಬಾಲಿಸಿದ ಯಲಹಂಕ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಮಂಜೇಗೌಡ ನೇತೃತ್ವದ ತಂಡ ಬಂಧಿಸಲು ಮುಂದಾದಾಗ ಆರೋಪಿಗಳಿಬ್ಬರು ಕಲ್ಲು ತೂರಿದ ಪರಿಣಾಮ ಅತ್ಮ ರಕ್ಷಣೆಗಾಗಿ ಗುಂಡು ಹಾರಿಸುವುದು ಅನಿರ್ವಾಯವಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !