ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಗಸ್ಟ್‌ 3ರಂದು ತಿರುಮಗೊಂಡನಹಳ್ಳಿ ರೈಲ್ವೆ ಗೇಟ್ ಬಂದ್

Published 2 ಆಗಸ್ಟ್ 2024, 15:27 IST
Last Updated 2 ಆಗಸ್ಟ್ 2024, 15:27 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಮುಖ್ಯರಸ್ತೆ ತಿರುಮಗೊಂಡನಹಳ್ಳಿ ರೈಲ್ವೆ ಗೇಟ್ ಆಗಸ್ಟ್‌ 3ರಂದು ಬೆಳಿಗ್ಗೆ 10ರಿಂದ  ಆಗಸ್ಟ್‌4 ಬೆಳಿಗ್ಗೆ 5ರವರೆಗೆ ಬಂದ್‌ ಮಾಡಲಾಗುವುದು ಎಂದು ರೈಲ್ವೆ ಇಲಾಖೆ ಸಾರ್ವಜನಿಕ ಪ್ರಕಟಣೆ ತಿಳಿಸಿದೆ.

ಈ ರೈಲ್ವೆ ಗೇಟ್‌ ಮೂಲಕ ಘಾಟಿ ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರಕ್ಕೆ ಪ್ರತಿದಿನ ನೂರಾರು ವಾಹನಗಳು ಹೋಗುತ್ತವೆ. ಗೇಟ್‌ ಬಳಿ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 20 ಗಂಟೆಗಳ ಕಾಲ ನಿರಂತರವಾಗಿ ಕೆಲಸ ನಡೆಯುತ್ತಿದೆ.

ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗದಂತೆ ಈ ರಸ್ತೆಗೆ ಬದಲಿಯಾಗಿ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಈ ಭಾಗದ ಗ್ರಾಮಗಳಿಗೆ ವಾಹನಗಳು ಹೋಗಲು ಗೌರಿಬಿದನೂರು ರಾಜ್ಯ ಹೆದ್ದಾರಿಯಲ್ಲಿನ ಗೊಲ್ಲಹಳ್ಳಿ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ ರಸ್ತೆ ಮೂಲಕ ಘಾಟಿ ಕ್ಷೇತ್ರ ಸೇರಿದಂತೆ ಈ ಭಾಗದ ಗ್ರಾಮಗಳಿಗೆ ಹೋಗಬಹುದಾಗಿದೆ. ಇದಲ್ಲದೆ ಬೆಂಗಳೂರು ಸೇರಿಂದಂತೆ ವಿವಿಧ ಕಡೆಗಳಿಂದ ಬರುವವರು ಗೌರಿಬಿದನೂರು ರಾಜ್ಯ ಹೆದ್ದಾರಿ ಮಾಕಳಿ ರೈಲ್ವೆ ನಿಲ್ದಾಣದ ರಸ್ತೆ ಮೂಲಕ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗಲು ಉತ್ತಮ ರಸ್ತೆ ಸೌಲಭ್ಯ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT