ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಬಾಕು ಸೇವನೆ ತ್ಯಜಿಸಲು ಸಲಹೆ

Last Updated 1 ಜೂನ್ 2022, 4:55 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಾಲ್ಲೂಕು ವಕೀಲರ ಸಂಘ, ಶ್ರೀಕೊಂಗಾಡಿಯಪ್ಪ ಪದವಿ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳಿಂದ ವಿಶ್ವ ತಂಬಾಕು ನಿಷೇಧ ದಿನಾಚರಣೆ ಅಂಗವಾಗಿ ಬೈಸಿಕಲ್‌ ಜಾಥಾ ನಡೆಯಿತು.

ಜಾಥಾಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶ ಅರವಿಂದ ಸಾಯಿಬಣ್ಣ ಹಾಗರಗಿ ಮಾತನಾಡಿ, ತಂಬಾಕು ಸೇವನೆ ಪ್ರಾಣಕ್ಕೆ ಕುತ್ತು ತರುತ್ತದೆ. ಈ ಸಂಗತಿ ತಿಳಿದರೂ ಯುವ ಸಮೂಹ, ವೃದ್ಧರು ಹೆಚ್ಚಿನ ಸಂಖ್ಯೆಯಲ್ಲಿ ವ್ಯಸನಿಗಳಾಗುತ್ತಿದ್ದಾರೆ ಎಂದು ವಿಷಾದಿಸಿದರು.

ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಿಂತರವಾಗಿ ನಡೆಯುತ್ತಲೇ ಇದ್ದರು ವ್ಯಸನಿಗಳ ಸಂಖ್ಯೆಯಲ್ಲಿ ಇಳಿಮುಖವಾಗಿಲ್ಲ. ಒಬ್ಬ ವ್ಯಕ್ತಿಯ ತಂಬಾಕು ಸೇವೆಯಿಂದಾಗಿ ಇಡೀ ಕುಟುಂಬ ಕಷ್ಟಕ್ಕೆ ಸಿಲುಕುವಂತಾಗುತ್ತಿದೆ. ಇಡೀ ವಿಶ್ವದಲ್ಲಿ ತಂಬಾಕು ಸೇವೆಯಿಂದ ಹಾನಿಯಾಗುತ್ತಿರುವ ಕುರಿತಂತೆ ಜಾಗೃತಿ ಮೂಡಿಸುವ ಸಲುವಾಗಿ 1987ರಿಂದ ವಿಶ್ವ ತಂಬಾಕು ನಿಷೇಧ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.

4ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ರಮೇಶ್‌ ದುರ್ಗಪ್ಪ ಎಕಬೋಟೆ, ಹೆಚ್ಚುವರಿ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಪ್ರೇಮಕುಮಾರ್‌, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಚ್‌.ಎಂ. ಮಂಜುನಾಥ್‌, ಪ್ರಧಾನ ಕಾರ್ಯದರ್ಶಿ ಎನ್‌. ಕೃಷ್ಣಮೂರ್ತಿ, ಖಜಾಂಚಿ ಆರ್‌. ರವಿ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT