ದೇವನಹಳ್ಳಿ: ಶಾಲಾ-ಕಾಲೇಜು ಸೇರಿದಂತೆ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ತಂಬಾಕು ನಿಷೇಧದ ಸೂಚನಾ ಫಲಕ ಕಡ್ಡಾಯವಾಗಿ ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೂಚಿಸಿದರು.

ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ, ಜಿಲ್ಲಾ ಕಣ್ಗಾವಲು ಸಮಿತಿ ಮತ್ತು ಜಿಲ್ಲಾ ಕಾರ್ಯಕಾರಿ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಜಾಗೃತಿ ಮೂಡಿಸುವುದು, ಮಕ್ಕಳ ಆರೋಗ್ಯ ಮತ್ತು ಉಜ್ವಲ ಭವಿಷ್ಯ ಕಾಪಾಡುವ ನಿಟ್ಟಿನಲ್ಲಿ ತಂಬಾಕು ನಿಯಂತ್ರಣ ಮತ್ತು ಜಾಗೃತಿ ಮುಖ್ಯ ಎಂದರು.

ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ, ಕಾಲೇಜು, ವಿಶ್ವವಿದ್ಯಾಲಯಗಳನ್ನು ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳೆಂದು ಘೋಷಿಸಲು ಹಾಗೂ ಕೋಟ್ಪಾ ಕಾಯ್ದೆ ಕಲಂ 6ಬಿಯನ್ನುಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಪಣ ತೊಡಬೇಕು. ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಸುತ್ತ 300 ಅಡಿಗಳ ಅಂತರದಲ್ಲಿ ತಂಬಾಕು ವ್ಯಾಪಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

₹41,920 ದಂಡ ವಸೂಲಿ: ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂದ ಕೋಟ್ಪಾ-2003 ಕಾಯ್ದೆ ಅನ್ವಯ ಏಪ್ರಿಲ್ 2025 ರಿಂದ ಆಗಸ್ಟ್ ವರೆಗೆ ಜಿಲ್ಲೆಯಾದ್ಯಂತ ವಿವಿಧ ಅಂಗಡಿ ಮುಂಗಟ್ಟುಗಳ ಮೇಲೆ 96 ದಾಳಿ ನಡೆಸಿದ್ದು, ನಿಯಮಗಳ ಉಲ್ಲಂಘನೆ ಮಾಡಿದವರ ವಿರುದ್ಧ ಸೆಕ್ಷನ್ 4 ರ ಅಡಿಯಲ್ಲಿ 334 ಪ್ರಕರಣ ದಾಖಲಿಸಿ, ₹41,920 ದಂಡ ಸಂಗ್ರಹಿಸಲಾಗಿದೆ ಎಂದು ಅಧಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಲತಾ ಕೃಷ್ಣಾ ರೆಡ್ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಹೇಮಾವತಿ ಎ.ವಿ, ಆರ್.ಸಿ.ಹೆಚ್ ಆದ ಡಾ. ಸಿಮಾ, ಡಾ. ವಿದ್ಯಾರಾಣಿ ಹಾಗೂ ಡಿವೈಎಸ್ಪಿ ರವಿ, ಜಿಲ್ಲಾ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತ್ಯೇಕ ಪರವಾನಗಿ ಪಡೆಯಿರಿ

ಎಲ್ಲಾ ನಗರಸಭೆ ಪುರಸಭೆ ಪಟ್ಟಣ ಪಂಚಾಯತಿಗಳ ವ್ಯಾಪ್ತಿಯಲ್ಲಿ ಅಂಗಡಿ ಮಾಲೀಕರು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರತ್ಯೇಕ ಪರವಾನಗಿ ಪಡೆಯಬೇಕು. ಎಲ್ಲಾ ಪರವಾನಗಿ ಹೊಂದಿರುವ ತಂಬಾಕು ಮಾರಾಟ ಅಂಗಡಿ ಮುಂಗಟ್ಟುಗಳು ತಂಬಾಕು ನಿಷೇಧ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿರಬೇಕು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ತಿಳಿಸಿದರು. ನಿಯಮ ಪಾಲಿಸಿದ ವರ್ತಕರ ವಿರುದ್ಧ ಕ್ರಮ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮಾರಾಟ ಮಾಡುವಂತಿಲ್ಲ. ಬೀಡಿ ಸಿಗರೇಟು ಗುಟ್ಕಾವನ್ನು ಮಕ್ಕಳಿಗೆ ಮಾರಾಟ ಮಾಡಬಾರದೆಂಬ ನಿಯಮಗಳಿದ್ದರೂ ವ್ಯಾಪಾರಿಗಳು ಪಾಲಿಸುತ್ತಿಲ್ಲ. ನಿಷೇಧಿತ ಸ್ಥಳಗಳಲ್ಲಿ ತಂಬಾಕು ಮಾರಾಟ ಮತ್ತು ಸೇವನೆ ಹಾಗೂ ತಂಬಾಕು ಮಾರಾಟ ಪರವಾನಗಿ ಇಲ್ಲದೇ ಮಾರಾಟ ಮಾಡಿದವರಿಗೆ ದಂಡ ವಿಧಿಸಲಾಗಿತ್ತದೆ ಜೊತೆಗೆ ಶಿಕ್ಷೆಗೆ ಗುರಿಯಾಗಬಹುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.