ಸೋಮವಾರ, ಸೆಪ್ಟೆಂಬರ್ 16, 2019
29 °C

ಮೇ 7ರಂದು ಬಸವೇಶ್ವರಸ್ವಾಮಿ ಬ್ರಹ್ಮರಥೋತ್ಸವ

Published:
Updated:

ಮಾಡಬಾಳ್‌(ಮಾಗಡಿ): ಕರ್ಲಹಳ್ಳಿ ತಾಂಡಾ ಬಸವೇಶ್ವರಸ್ವಾಮಿ ಬ್ರಹ್ಮರಥೋತ್ಸವ ಮೇ 7ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದು ದೇವಾಲಯ ಟ್ರಸ್ಟಿನ ಅಧ್ಯಕ್ಷ ರಂಗರೇವಣ್ಣ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವ ಜಯಂತಿ ಅಂಗವಾಗಿ ಮಂಗಳವಾರ ಬೆಳಿಗ್ಗೆ 6ರಿಂದ 8ರವರಗೆ ಬಸವೇಶ್ವರಸ್ವಾಮಿಗೆ ರುದ್ರಾಭಿಷೇಕ, ಗಣಪತಿ, ಆಂಜನೇಯ, ನವಗ್ರಹಗಳಿಗೆ ಹೋಮ ನಡೆಯಲಿದೆ. ರಾತ್ರಿ 8ಕ್ಕೆ ಹೂವಿನ ಪಲ್ಲಕ್ಕಿ ಉತ್ಸವ, ಸಿಡಿಮದ್ದು ಪ್ರದರ್ಶನ ಏರ್ಪಡಿಸಲಾಗಿದೆ. ರಾತ್ರಿ 9ಕ್ಕೆ  ‘ಸುಂದರಕಾಂಡ ರಾಮಾಯಣ’ ಪೌರಾಣಿಕ ನಾಟಕ ನಡೆಯಲಿದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಎಚ್‌.ಎಂ.ರೇವಣ್ಣ, ಶಾಸಕ ಎ.ಮಂಜುನಾಥ, ಕಾಂಗ್ರೆಸ್‌ ಮುಖಂಡ ಎಚ್‌.ಸಿ.ಬಾಲಕೃಷ್ಣ, ಸಮಾಜ ಸೇವಕ ಕೆ.ಬಾಗೇಗೌಡ, ಜಿಲ್ಲಾಪಂಚಾಯಿತಿ ಸದಸ್ಯರಾದ ಚಂದ್ರಮ್ಮನಂಜಯ್ಯ, ನಾಗರತ್ನ ಚಂದ್ರೇಗೌಡ ಭಾಗವಹಿಸಲಿದ್ದಾರೆ ಎಂದು ಟ್ರಸ್ಟಿನ ಕಾರ್ಯದರ್ಶಿ ಎನ್‌.ರಂಗಸ್ವಾಮಯ್ಯ ತಿಳಿಸಿದರು.

Post Comments (+)