ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಕಾಂಗ್ರೆಸ್‌ನಿಂದ ಪಂಜಿನ‌ ಮೆರವಣಿಗೆ

Last Updated 7 ಅಕ್ಟೋಬರ್ 2021, 5:00 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ:ಉತ್ತರ ಪ್ರದೇಶದ ಲಖಿಂಪುರ–ಖೇರಿ ಹಿಂಸಾಚಾರ, ರೈತರ ಹತ್ಯೆ, ಪ್ರಿಯಾಂಕಾ ವಾದ್ರಾ ಅವರ ಗೃಹ ಬಂಧನ ಖಂಡಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ನಗರದಲ್ಲಿ ಮಂಗಳವಾರ ರಾತ್ರಿ ಶಾಸಕ ಟಿ. ವೆಂಕಟರಮಣಯ್ಯ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಯಿತು.

ಬಿಜೆಪಿ ಸರ್ಕಾರದ ವಿರುದ್ಧ ನಗರ, ಗ್ರಾಮಾಂತರ, ಯುವ ಕಾಂಗ್ರೆಸ್‌, ಮಹಿಳಾ ಕಾಂಗ್ರೆಸ್ ಘಟಕದಿಂದ ನಗರದ ಬಸ್‌ನಿಲ್ದಾಣದಿಂದ ಪ್ರಮುಖ ರಸ್ತೆಗಳಲ್ಲಿ ಪಂಜಿನ ಮೆರವಣಿಗೆ ನಡೆಯಿತು.

ಶಾಸಕ ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಜಿ. ಲಕ್ಷ್ಮೀಪತಿ ಮಾತನಾಡಿ, ‘ಪ್ರಜಾಪ್ರಭುತ್ವದ ಆಡಳಿತದಲ್ಲಿ ಶಾಂತಿಯುತ ಹೋರಾಟ ಮತದಾರರ ಹಕ್ಕು. ಆದರೆ ಹೋರಾಟ ಹತ್ತಿಕ್ಕಲು ಹೊರಟಿರುವ ಕೇಂದ್ರದ ಬಿಜೆಪಿ ಆಡಳಿತಗಾರರು ಅಪಘಾತದ ನೆಪದಲ್ಲಿ ರೈತರನ್ನು ಹತ್ಯೆ ಮಾಡಿದ್ದಾರೆ’ ಎಂದು ಟೀಕಿಸಿದರು.

ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಟ ಮಾಡುವುದು ಈಗ ಅನಿವಾರ್ಯವಾಗಿದೆ. ರೈತರ ಹತ್ಯೆ ಖಂಡಿಸಿರುವ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಅವರಿಗೆ ಗೃಹಬಂಧನ ವಿಧಿಸಿರುವುದನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.

ಪಂಜಿನ ಮೆರವಣಿಗೆಯಲ್ಲಿ ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಎಂ. ಬೈರೇಗೌಡ, ಕಸಬಾ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ನಗರ ಬ್ಲಾಕ್‌ ಅಧ್ಯಕ್ಷ ಕೆ.ಪಿ. ಜಗನ್ನಾಥ್‌, ಮುಖಂಡರಾದ ಆಂಜನಮೂರ್ತಿ, ಆದಿತ್ಯ ನಾಗೇಶ್, ರೇವತಿ ಅನಂತರಾಮ್, ಅಖಿಲೇಶ್, ಶ್ರೀನಗರ ಬಷೀರ್, ಪು. ಮಹೇಶ್, ಮಜರಾಹೊಸಹಳ್ಳಿ ಗ್ರಾ.ಪಂ‌.ಅಧ್ಯಕ್ಷ ಸಂದೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT