ಮಂಗಳವಾರ, ಆಗಸ್ಟ್ 16, 2022
21 °C

ಟೊಯೊಟಾ ಕಾರ್ಮಿಕರ ಮುಷ್ಕರಸ್ಥಳಕ್ಕೆ ಮಾಜಿ ಶಾಸಕ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಿಡದಿ: ಮಾಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಟೊಯೊಟಾ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಶನಿವಾರ ಭೇಟಿ ನೀಡಿದರು. 

ನಂತರ ಮಾತನಾಡಿದ ಅವರು, ‘ಮನುಷ್ಯನು ತಪ್ಪು ಮಾಡುವುದು ಸಹಜ. ಆದರೆ ತಪ್ಪನ್ನು ತಿದ್ದುಕೊಳ್ಳುವುದು ಅಷ್ಟೇ ಮುಖ್ಯ. ಇದನ್ನು ತಿಳಿದುಕೊಂಡು ಆಡಳಿತ ಮಂಡಳಿ ಹಾಗೂ ಕಾರ್ಮಿಕರು ಮಾತುಕತೆಯ ಮುಖಾಂತರ ಸಮಸ್ಯೆ ಬಗೆಹರಿಸಿಕೊಳ್ಳಬೇಕು’ ಎಂದು ಹೇಳಿದರು. 

‘ಬಿಕ್ಕಟ್ಟು ಹೀಗೆ ಮುಂದುವರಿದರೆ, ರಾಮನಗರ ಜಿಲ್ಲಾಧಿಕಾರಿ ಕೂಡಲೇ ಮಧ್ಯಸ್ಥಿಕೆ ವಹಿಸಬೇಕು. ಇಲ್ಲವಾದರೆ ಕಚೇರಿ ಮುಂದೆ ಧರಣಿ ನಡೆಸುತ್ತೇವೆ’ ಎಂದು ಎಚ್ಚರಿಸಿದರು.

ಕಾರ್ಮಿಕ ಸಂಘದ ಕಾರ್ಯದರ್ಶಿ ಬಸವರಾಜ್ ಮಾತನಾಡಿ, ‘ಆಡಳಿತ ವರ್ಗ ಹೋರಾಟವನ್ನು ಹತ್ತಿಕ್ಕಲು ಪ್ರತಿಭಟನಾ ಸ್ಥಳಕ್ಕೆ ಬೇಲಿ ಹಾಕಲು ಪ್ರಯತ್ನಿಸುತ್ತಿದೆ. ಕಾರ್ಮಿಕ ಸಂಘ ಇದನ್ನು ತೀವ್ರವಾಗಿ ಖಂಡಿಸುತ್ತದೆ. ಈ ದುರಾಲೋಚನೆ ಬಿಟ್ಟು,  ಉತ್ತಮ ಕೆಲಸದ ವಾತಾವರಣ ರೂಪಿಸಲು ಶ್ರಮಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.