ಭಾನುವಾರ, ಮಾರ್ಚ್ 7, 2021
28 °C

ಸ್ಥಳೀಯ ಸಮಸ್ಯೆ ನಿವಾರಣೆಗೆ ಶ್ರಮಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಗ್ರಾಮಾಂತರ ಪ್ರದೇಶದ ಯುವಜನರು ಸ್ಥಳೀಯ ಸಮಸ್ಯೆಗಳ ಕುರಿತು ಜಾಗೃತರಾಗುವುದರ ಜತೆಗೆ ಅವುಗಳ ನಿವಾರಣೆಗಾಗಿ ಶ್ರಮಿಸುವುದು ಅಗತ್ಯ ಎಂದು ಬಸವ ಕಲ್ಯಾಣ ಮಠದ ಅಧ್ಯಕ್ಷ ಮಹದೇವಸ್ವಾಮೀಜಿ ಅಭಿಪ್ರಾಯಪಟ್ಟರು.

ಇಲ್ಲಿನ ಬಸವ ಕಲ್ಯಾಣ ಮಠದಲ್ಲಿ ಆಯೋಜಿಸಿದ್ದ ‘ಸಮುದಾಯ ಸಹಬಾಳ್ವೆ’ ಶಿಬಿರ ಉದ್ಘಾಟಿಸಿ ಮಾತನಾಡಿದರು. ಯುವಪೀಳಿಗೆಗೆ ಗ್ರಾಮೀಣ ಭಾಗದಲ್ಲಿನ ಸಮಸ್ಯೆಗಳ ಅರಿವು ಮೂಡಿಸುವ ಕೆಲಸವಾಗಬೇಕು. ಕೇವಲ ಕಾಲೇಜಿನಲ್ಲಿ ಕುಳಿತು ಕಲಿಯುವ ಜ್ಞಾನಾರ್ಜನೆಗಿಂತ ಹೊರಗಿನ ಜನರ ನೋವು, ನಲಿವು ಅರಿಯಬೇಕೆಂದು ಹೇಳಿದರು.

ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಹೆಚ್ಚು ಅನಾಹುತಗಳಾಗುತ್ತಿವೆ. ಈ ಕುರಿತು ಜಾಗೃತಿ ಅವಶ್ಯ. ಮಕ್ಕಳಲ್ಲಿ ತಾಯಿ ಪ್ರೇಮ, ಶಿಸ್ತು, ರಾಷ್ಟ್ರಭಕ್ತಿಯಂತಹ ಮೌಲ್ಯಗಳನ್ನು ಬೆಳೆಸಬೇಕು ಎಂದು ಕಿವಿಮಾತು ಹೇಳಿದರು.

ಚಿಕ್ಕಬಳ್ಳಾಪುರ ಕೆ.ವಿ.ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಪಿ.ಎನ್.ಶೇಖರ್ ಮಾತನಾಡಿ, ಶಿಕ್ಷಕರು ಸಮಾಜದ ಪರಿವರ್ತಕರು. ಆರೋಗ್ಯವಂತ ಸಮಾಜ ನಿರ್ಮಾಣ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದು. ಶಿಕ್ಷಕರಲ್ಲಿ ಸಮರ್ಪಣಾ ಮನೋಭಾವ ಇರಬೇಕು. ಮಕ್ಕಳ ಮಾನಸಿಕ ಸಾಮರ್ಥ್ಯ ಅರ್ಥ ಮಾಡಿಕೊಂಡು ಬೋಧನೆ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದರು.

ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿ, ಶಿಕ್ಷಕರು ನವಸಮಾಜದ ನಿರ್ಮಾಣಕ್ಕೆ ಪಣತೊಡಬೇಕೆಂದು ಕಿವಿಮಾತು ಹೇಳಿದರು.

ಚಿಂತಾಮಣಿ ಗಾಯಕ ಚಂದ್ರಶೇಖರ್, ಚಿಕ್ಕಬಳ್ಳಾಪುರ ಜಿಲ್ಲಾ ಸೇವಾದಳ ಸಂಚಾಲಕ ಪ್ರಕಾಶ್ ಅವರಿಂದ ಜಾಗೃತಿ ಗೀತೆಗಳ ಗಾಯನ ನಡೆಯಿತು. ಶ್ರೀ ಕೃಷ್ಣ ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಆರ್.ಬಿ.ದೇಸಾಯಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.