ಮಂಗಳವಾರ, ಸೆಪ್ಟೆಂಬರ್ 29, 2020
23 °C

ದೇವನಹಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವ ವೇಳೆ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಇಲ್ಲಿನ ಏರ್‌ಲೈನ್‌ ಡಾಬಾ ಬಳಿ ನಡೆದಿದೆ.

ಬಂಧಿತ ಆರೋಪಿಗಳಾದ ಮುನಿರಾಜು ಹಾಗೂ ನಾಗೇಶ್ ಅವರಿಂದ ₹1.75 ಲಕ್ಷ ಮೌಲ್ಯದ 3.5 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸಕೋಟೆ ತಾಲ್ಲೂಕು ಸೂಲಿಬೆಲೆ ಹೋಬಳಿ ರಸ್ತೆ ಕಡೆಯಿಂದ ಗಾಂಜಾ ತಂದಿರುವುದಾಗಿ ಆರೋಪಿಗಳು ತಿಳಿಸಿದ್ದು ಗಾಂಜಾ ಅಕ್ರಮ ಮಾರಾಟ ವಹಿವಾಟುವಿನ ಬೃಹತ್ ಜಾಲದ ಮಾಹಿತಿ ಲಭ್ಯವಾಗಿದ್ದು ಪತ್ತೆಗಾಗಿ ಎರಡು ತಂಡಗಳನ್ನು ರಚಿಸಲಾಗಿದೆ ಎಂದು ಎ.ಸಿ.ಪಿ ಸುಬ್ರಮಣಿ
ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು