ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಅರಣ್ಯ ಇಲಾಖೆ ಸಿಬ್ಬಂದಿ ಸಾವು

Published 30 ಮಾರ್ಚ್ 2024, 5:40 IST
Last Updated 30 ಮಾರ್ಚ್ 2024, 5:40 IST
ಅಕ್ಷರ ಗಾತ್ರ

ಆನೇಕಲ್: ಪಟ್ಟಣದ ದೇವರಕೊಂಡಪ್ಪ ವೃತ್ತ ಸಮೀಪದ ಶುಕ್ರವಾರ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದು, ವಾಹನದ ಹಿಂಬದಿಯಲ್ಲಿದ್ದ ವ್ಯಕ್ತಿ ತೀವ್ರ ಗಾಯಗೊಂಡಿದ್ದಾರೆ.

ತಮ್ಮಾಪುರ ರಾಕೇಶ್‌(35) ಮೃತರು. ತೀವ್ರ ಗಾಯಗೊಂಡಿರುವ ವಿನಯ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಕೇಶ್‌ ಮತ್ತು ವಿನಯ್ ಅರಣ್ಯ ಇಲಾಖೆಯಲ್ಲಿ ವಾಚರ್‌ ಆಗಿ ಸೇವೆ ಸಲ್ಲಿಸುತ್ತಿದ್ದರು. ಬ್ಯಾಂಕ್‌ ಕೆಲಸದ ನಿಮಿತ್ತ ಶುಕ್ರವಾರ ಇಬ್ಬರು ದ್ವಿಚಕ್ರ ವಾಹನದಲ್ಲಿ ತೆರಳಿದ್ದರು. ಈ ಸಂದರ್ಭದಲ್ಲಿ ಲಾರಿಯನ್ನು ಹಿಂದಿಕ್ಕುವ ಯತ್ನದಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ರಾಕೇಶ್‌ ತಲೆಯ ಮೇಲೆ ಲಾರಿ ಚಕ್ರ ಹರಿದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆನೇಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ರಾಕೇಶ್‌ ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆಯ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದು ಗುರುವಾರ ಜಿಂಕೆ ಬೇಟೆಗಾರರನ್ನು ಬಂಧಿಸಿದ ತಂಡದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT