ಮಂಗಳವಾರ, ಅಕ್ಟೋಬರ್ 20, 2020
21 °C

ಸೂಲಿಬೆಲೆ: ಅಕ್ರಮ ಬಡಾವಣೆ ತೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೂಲಿಬೆಲೆ: ಹೋಬಳಿಯ ಸೂಲಿಬೆಲೆ, ಗಿಡ್ಡಪ್ಪನಹಳ್ಳಿ ಮತ್ತು ಬತ್ತಿಗಾನಹಳ್ಳಿ ಸರ್ವೆ ನಂಬರ್ ಜಮೀನುಗಳಲ್ಲಿ ಅಕ್ರಮವಾಗಿ ನಿರ್ಮಾಣವಾಗಿದ್ದ ಬಡಾವಣೆಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳು ತೆರವುಗೊಳಿಸಿದರು.

‘ಸೂಲಿಬೆಲೆ ಸರ್ವೆ ನಂಬರ್ 25, ಗಿಡ್ಡಪ್ಪನಹಳ್ಳಿ 36/2 ಹಾಗೂ ಬತ್ತಿಗಾನಹಳ್ಳಿಯ 7/2, 7/3 ನಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಬಡಾವಣೆಗಳನ್ನು ತೆರವುಗೊಳಿಸಲಾಗಿದ್ದು, ಹಂತ ಹಂತವಾಗಿ ತೆರವುಗೊಳಿಸುವ ಕಾರ್ಯ ಮುಂದುವರಿಯಲಿದೆ’ ಎಂದರು.

ಸೂಲಿಬೆಲೆ ಗ್ರಾಮಕ್ಕೆ ಸೇರಿದ ಸರ್ವೆ ನಂಬರ್ ಜಮೀನುಗಳಲ್ಲಿ ಸುಮಾರು 27 ಅನಧಿಕೃತ ಬಡಾವಣೆಗಳು ನಿರ್ಮಾಣಗೊಂಡಿವೆ ಎಂದು ಕಂದಾಯ ಇಲಾಖೆಯ ಅಧಿಕಾರಿ ತಿಳಿಸಿದರು.

ಸೂಲಿಬೆಲೆ ಹೋಬಳಿಯ ರಾಜಸ್ವ ನಿರೀಕ್ಷಕ ವಲೀಜಾನ್, ಗ್ರಾಮ ಲೆಕ್ಕಿಗರಾದ ನ್ಯಾನಮೂರ್ತಿ, ರಫೀಕ್, ಅನುಪಮಾ, ಲಕ್ಷ್ಮಣ್, ಚಕ್ರವರ್ತಿ ಮತ್ತು ಕಂದಾಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.