ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ | ಇಬ್ಬರು ಕಾರ್ಮಿಕರು ಸಾವು; 16 ಮಂದಿಗೆ ಗಾಯ

Published 19 ಜನವರಿ 2024, 10:02 IST
Last Updated 19 ಜನವರಿ 2024, 10:02 IST
ಅಕ್ಷರ ಗಾತ್ರ

ಆನೇಕಲ್‌: ತಾಲ್ಲೂಕಿನ ಬಾಡರಹಳ್ಳಿಯಲ್ಲಿ ಶುಕ್ರವಾರ ನಿರ್ಮಾಣ ಹಂತದ ಖಾಸಗಿ ಶಾಲಾ ಕಟ್ಟಡ ಕುಸಿದಿದೆ. ಈ ವೇಳೆ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, 16ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.

ಜಾರ್ಖಂಡ್ ಮೂಲದ ಮಿನರ್ ಬಿಶ್ವಾಸ್, ಶಾಹಿದ್ ಮೃತ ಕಾರ್ಮಿಕರು.

ಗಾಯಾಳುಗಳನ್ನು ಆನೇಕಲ್‌ನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ಬೆಳಗ್ಗೆ ಕಾಂಕ್ರಿಟ್ ಹಾಕುತ್ತಿದ್ದ ವೇಳೆ ಸೆಂಟ್ರಿಂಗ್ ಕುಸಿದು ಅವಘಡ ಸಂಭವಿಸಿದೆ. ಸೆಂಟ್ರಿಂಗ್ ಮೇಲೆ ತೂಕ ಹೆಚ್ಚಾಗಿದ್ದರಿಂದ ಅದು ಕುಸಿದಿದೆ ಎನ್ನಲಾಗಿದೆ.

ಕಾಂಕ್ರಿಟ್ ಕೆಳಗೆ ಇನ್ನಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ಇದ್ದು, ಅಗ್ನಿಶಾಮಕ ಸಿಬ್ಬಂದಿ ಜೊತೆ ರಾಜ್ಯ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ ಮಲ್ಲಿಕಾರ್ಜುನ ಬಾಲದಂಡೆ ಭೇಟಿ ನೀಡಿ, ಆನೇಕಲ್ ಪೊಲೀಸರ ಬಳಿ ಮಾಹಿತಿ ಪಡೆದುಕೊಂಡರು.

ಸೆಂಟ್ರಿಂಗ್ ಗಟ್ಟಿಯಾಗಿ ಹಾಕಿರಲಿಲ್ಲ. ಇದರಿಂದ ಅವಘಡ ಸಂಭವಿಸಿದೆ. ಮೇಲ್ನೋಟಕ್ಕೆ ನಿರ್ಲಕ್ಷ್ಯ ಕಂಡು ಬಂದಿದೆ. ಘಟನೆಗೆ ಕಾರಣರಾದವರ ವಿರುದ್ಧ ಕಾನುನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT