ಸೋಮವಾರ, ಆಗಸ್ಟ್ 15, 2022
21 °C

ಬಂದ್‌ ಸಂದರ್ಭದಲ್ಲಿ ಅಹಿತಕರ ಘಟನೆಗೆ ಅವಕಾಶವಿಲ್ಲ: ಡಿವೈಎಸ್‌ಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಪ್ರತಿಭಟನೆ ಮಾಡುವ ಹಕ್ಕು ಇದೆ ಎಂದು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ ಎಂದು ಡಿವೈಎಸ್‌ಪಿ ಟಿ.ರಂಗಪ್ಪ ಹೇಳಿದರು.

ಡಿ.5 ರಂದು ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಗುರುವಾರ ಕನ್ನಡ ಪರ, ರೈತ ಮತ್ತು ದಲಿತ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಶಾಂತಿಯುತ ಬಂದ್‌ಗೆ ಇಲಾಖೆ ಸಹಕಾರ ಇದೆ. ಮಾನವೀಯ ನೆಲೆಯಲ್ಲಿ ಪ್ರತಿಭಟನೆ ಇರಬೇಕು. ಪ್ರತಿಭಟನಾ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆಗೆ ತೊಂದರೆಯುಂಟು ಮಾಡಿದರೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದರು.

ಸರ್ಕಲ್ ಇನ್‌ಸ್ಪೆಕ್ಟರ್‌ ಎಂ.ಬಿ.ನವೀನ್‌ಕುಮಾರ್, ಸಬ್‌ಇನ್‌ಸ್ಪೆಕ್ಟರ್‌ ಸೋಮಶೇಖರ್, ಮಂಜುನಾಥ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.