ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆಗೆ ವೇತನಸಹಿತ ರಜೆ

Last Updated 2 ಸೆಪ್ಟೆಂಬರ್ 2021, 3:39 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ:ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ, ಕಾಲೇಜು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ, ಖಾಸಗಿ ಉದ್ದಿಮೆ, ಖಾಸಗಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಸೆ. 3ರಂದು ವೇತನ ಸಹಿತ ರಜೆ ನೀಡಿ ರಾಜ್ಯ ಚುನಾವಣೆ ಆಯೋಗದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ನಗರಸಭೆ ವ್ಯಾಪ್ತಿಯವರು ಬೇರೆಡೆ ತೆರಳಿ ಉದ್ಯೋಗ ಮಾಡುವುದರಿಂದ ಮತದಾನ ನಡೆಸಲು ಅನನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ಈ ಕ್ರಮಕೈಗೊಂಡಿದೆ. ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ, ಸಂಸ್ಥೆಗಳಲ್ಲಿ ಎಲ್ಲಾ ವ್ಯಾವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳಲ್ಲಿ ಹಾಗೂ ಇತರೆ ಸಂಸ್ಥೆಗಳಲ್ಲಿ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾಗುವಂತೆ ವೇತನ ಸಹಿತ ರಜೆ ಘೋಷಿಸಿ ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT