ಶುಕ್ರವಾರ, ಜೂನ್ 18, 2021
21 °C

ಅವೈಜ್ಞಾನಿಕ ಕಸ ವಿಲೇವಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಖಾನೆಗಳು ರಾತ್ರಿವೇಳೆ ಅಕ್ರಮವಾಗಿ ಖಾಸಗಿ ಜಮೀನಿನಲ್ಲಿ ತ್ಯಾಜ್ಯ ತಂದು ಸುರಿಯುತ್ತಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ಕೈಗಾರಿಕಾ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಲವು ಕಾರ್ಖಾನೆಗಳು ನಿಯಮಬಾಹಿರವಾಗಿ ರಾಸಾಯನಿಕ ಯುಕ್ತ ತ್ಯಾಜ್ಯವನ್ನು ಎಲ್ಲೆಂದರಲ್ಲಿ ತಂದು ಸುರಿಯುತ್ತಿದ್ದಾರೆ. ರಾತ್ರಿವೇಳೆ ಕಸದ ರಾಶಿಗೆ ಬೆಂಕಿ ಹೆಚ್ಚುತ್ತಿರುವುದರಿಂದ ಈ ಪ್ರದೇಶದಲ್ಲಿ ಪರಿಸರ ಮಾಲಿನ್ಯ ಉಂಟಾಗುವ ಜೊತೆಗೆ ಅಂತರ್ಜಲ ಕಲುಷಿತವಾಗುತ್ತಿದೆ. ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಪರಿಸರ ಮಾಲಿನ್ಯ ಇಲಾಖೆಗೆ ದೂರು ನೀಡಿದ್ದರೂ ಇದುವರೆಗೂ ಕೈಗಾರಿಕೆಗಳ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ದೂರಿದರು.

ಕಸದ ರಾಶಿ ಇದ್ದ ಸ್ಥಳಗಳಿಗೆ ಬುಧವಾರ ಭೇಟಿ ನೀಡಿದ್ದ ಪರಿಸರ ಮಾಲಿನ್ಯ ಇಲಾಖೆಯ ಅಧಿಕಾರಿ ಸುನೀತಾ, ನಿಯಮಬಾಹಿರವಾಗಿ ತ್ಯಾಜ್ಯ ಸುರಿಯುತ್ತಿರುವ ಕಾರ್ಖಾನೆಗಳ ವಿರುದ್ಧ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕರವೇ ಜಿಲ್ಲಾ ಅಧ್ಯಕ್ಷ ರಮೇಶ್ ‌ವಿರಾಜ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎಸ್.ಎಲ್. ಎನ್. ವೇಣು, ಪ್ರಧಾನ ಸಂಚಾಲಕ ಕಾರಳ್ಳಿ ಮಂಜು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು