ಶುಕ್ರವಾರ, ಆಗಸ್ಟ್ 23, 2019
22 °C

ಸೋರುತ್ತಿರುವ ಶಾಲೆ ದುರಸ್ತಿಗೊಳಿಸಿ

Published:
Updated:
Prajavani

ಮಾಗಡಿ: ಕೆ.ವಿ.ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದುರಸ್ತಿ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ತಾಲ್ಲೂಕು ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ನಾಯ್ಕ್‌ ತಿಳಿಸಿದರು.

ನಿವಾಸಿಗಳ ಮನವಿ ಮೇರೆಗೆ ಶಾಲೆಗೆ ಭೇಟಿ ನೀಡಿ ದುರಸ್ತಿ ಕಾಮಗಾರಿ ವೀಕ್ಷಿಸಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅನುದಾನದಲ್ಲಿ ದುರಸ್ತಿ ಕಾಮಗಾರಿ ನಡೆದಿದೆ. ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಕಾಮಗಾರಿ ಕಳಪೆಯಿಂದ ಕೂಡಿದೆ. ಬಿರುಕು ಬಿಟ್ಟಿರುವ ಗೋಡೆ ಮತ್ತು ಚಾವಣಿ ಮೇಲೆ ಮಳೆ ನೀರು ಸೋರದಂತೆ ಚುರುಕಿ ಹಾಕಿಲ್ಲ. ಸ್ವಲ್ಪ ಮಳೆ ಬಿದ್ದರೂ ಮಳೆ ನೀರು ಶಾಲೆ ಒಳಗೆ ಇಳಿಯುತ್ತಿದೆ. ಕಾಮಗಾರಿ ಪೂರ್ಣಗೊಳಿಸುವ ತನಕ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಬಾರದು. ಶಾಲಾ ಮಕ್ಕಳು ಗುಂಡಿ ಒಳಗೆ ಬಿದ್ದು ನಿತ್ಯ ಗಾಯ ಮಾಡಿಕೊಳ್ಳುತ್ತಿದ್ದಾರೆ. ಸಂಬಂಧಿಸಿದವರು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

Post Comments (+)