ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

52 ಸಾವಿರ ರಾಸುಗಳಿಗೆ ಲಸಿಕೆ ಗುರಿ

ಡಿ. 7ರವರೆಗೆ ಅಭಿಯಾನ: ರೈತರಲ್ಲಿ ಜಾಗೃತಿ
Last Updated 8 ನವೆಂಬರ್ 2022, 6:59 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ:ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ, ಬಮೂಲ್ ಸಹಯೋಗದಡಿ ತಾಲ್ಲೂಕಿನಾದ್ಯಂತ ಮೂರನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮಕ್ಕೆ ಸೋಮವಾರ ನಗರದ ಪಶು ವೈದ್ಯಕೀಯ ಇಲಾಖೆ ಕಚೇರಿಯಿಂದ ಚಾಲನೆ ನೀಡಲಾಗಿದೆ.

ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಎಸ್. ವಿಶ್ವನಾಥ್ ಈ ಕುರಿತು ಮಾಹಿತಿ ನೀಡಿ, ತಾಲ್ಲೂಕಿನಲ್ಲಿ 52 ಸಾವಿರ ಜಾನುವಾರುಗಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು.

ಡಿ. 7ರ ವರೆಗೆ ನಡೆಯಲಿರುವ ಅಭಿಯಾನದಲ್ಲಿ ಪ್ರತಿದಿನ ಬೆಳಿಗ್ಗೆ 6.30 ರಿಂದ ಬೆಳಿಗ್ಗೆ 11 ಗಂಟೆವರೆಗೆ ನಿಗದಿತ ವೇಳಾಪಟ್ಟಿಯಂತೆ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಸಿಬ್ಬಂದಿ ಉಚಿತವಾಗಿ ಲಸಿಕೆ ನೀಡಲಿದ್ದಾರೆ. ಅಂದಿನ ಮಾಹಿತಿಯನ್ನು ಅಪ್‌ಲೋಡ್‌ ಮಾಡಲಾಗುತ್ತಿದೆ. ಪ್ರತಿ ಗ್ರಾಮವಾರು ಮೈಕ್ರೋಪ್ಲಾನ್ ಮಾಡಲಾಗಿದ್ದು, ಅದರ ಅನ್ವಯ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಮುಂಜಾಗ್ರತಾ ಕ್ರಮವಾಗಿ ರಾಸುಗಳಿಗೆ ಲಸಿಕೆ ಹಾಕುವುದರಿಂದ ಕಾಲುಬಾಯಿ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಬಹುದು. ರೋಗಗ್ರಸ್ತ ರಾಸುಗಳನ್ನು ಆರೋಗ್ಯವಂತ ದನಗಳಿಂದ ಬೇರ್ಪಡಿಸಿ ಕೂಡಲೇ ಪಶುವೈದ್ಯರಿಂದ ಸೂಕ್ತ ಚಿಕಿತ್ಸೆಗೆ ಒಳಪಡಿಸಬೇಕು ಎಂದು ಸಲಹೆ ನೀಡಿದರು.

ರಾಸುಗಳ ಗಾಯದ ಸೂಕ್ತ ಉಪಚಾರದ ಜೊತೆಯಲ್ಲಿ ಖನಿಜ ಮಿಶ್ರಣ ರೋಗ ನಿರೋಧಕ ಶಕ್ತಿ ವೃದ್ಧಿಸುವ ಔಷಧಿ ಬಳಸುವುದರಿಂದ ಜಾನುವಾರುಗಳು ನಿಶ್ಯಕ್ತವಾಗುವುದನ್ನು ತಪ್ಪಿಸಬಹುದು. ರೈತರು ರಾಸುಗಳಿಗೆ ಲಸಿಕೆ ಹಾಕಿಸಿಕೊಳ್ಳುವುದರಿಂದ ಅವುಗಳಲ್ಲಿನ ಹಾಲಿನ ಪ್ರಮಾಣ ಕಡಿಮೆ ಆಗುವುದಿಲ್ಲ. ರೈತರು ಮೂರು ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT