ಗುರುವಾರ , ಜನವರಿ 28, 2021
22 °C

ಕೋವಿಡ್ -19 ಲಸಿಕಾ ತಾಲೀಮು: ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಕೊರೊನಾ ಸೋಂಕು ತಡೆಗಟ್ಟಲು ಲಸಿಕೆ ನೀಡುವ ಕುರಿತು ಕೋವಿಡ್ -19 ಲಸಿಕಾ ತಾಲೀಮು ತಾಲ್ಲೂಕಿನ ಆರೋಗ್ಯ ಕೇಂದ್ರಗಳಲ್ಲಿ ಶುಕ್ರವಾರ ನಡೆಯಿತು.

ನಗರದ ತಾಯಿ ಮತ್ತು ಮಗು ಸಾರ್ವಜನಿಕ ಆಸ್ಪತ್ರೆ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಎ.ಎನ್.ಶ್ರೀನಿವಾಸ್, ಒಂದೆರಡು ವಾರಗಳಲ್ಲಿ ಕೋವಿಡ್ ಲಸಿಕೆ ನಗರದ ಆಸ್ಪತ್ರೆಗೆ ಬರುವ ನಿರೀಕ್ಷೆ ಇದೆ. ಕೊರೊನಾ ಸೋಂಕು ತಡೆಗಟ್ಟಲು ನೀಡಲಾಗುವ ಲಸಿಕೆ ಸಂಗ್ರಹಕ್ಕೆ ಅಗತ್ಯ ಇರುವ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ಈ ಕುರಿತು ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಲಸಿಕೆ ನೀಡಿಕೆ ಕುರಿತಂತೆ ರಾಜ್ಯ ಸರ್ಕಾರದಿಂದ ಬರುವ ಮಾರ್ಗದರ್ಶಿ ಸೂಚನೆ ಅನುಸಾರ ಲಸಿಕೆ ನೀಡಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5 ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ 25 ಫಲಾನುಭವಿಗಳ ಪಟ್ಟಿ ತಯಾರಿಸಲಾಗಿದೆ.

ಶುಕ್ರವಾರ ನಡೆದ ತಾಲೀಮಿನಲ್ಲಿ ಮೊದಲು ನೋಂದಾಯಿತ ಆರೋಗ್ಯ ಕಾರ್ಯಕರ್ತರು ಮೊದಲು ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್‍ಗೆ ಒಳಗಾಗಿ ಕೋವಿಡ್ ಮುಂಜಾಗ್ರತೆಯೊಂದಿಗೆ ಕೇಂದ್ರದಲ್ಲಿ ಗುರುತಿನ ಚೀಟಿ ತೋರಿಸಬೇಕು. ಫಲಾನುಭವಿ ನೋಂದಣಿ ಪರಿಶೀಲಿಸಿ ಚುಚ್ಚು ಮದ್ದು ಕೊಠಡಿಗೆ ಕಳುಹಿಸಲಾಗುತ್ತದೆ ಎಂದು ಹೇಳಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ್ ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ರಮೇಶ್, ಡಾ.ಅರುಣ್ ಕುಮಾರ್ ಇತರರು
ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು