ಭಾನುವಾರ, ಜನವರಿ 19, 2020
29 °C

ಹೊಸಕೋಟೆ: ಸಾಲಿನಲ್ಲಿ ಬಂದು ಭಕ್ತರಿಂದ ದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ನಗರದ ವಿವಿಧ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ದೇವರಿಗೆ ವಿವಿದ ಅಲಂಕಾರಗಳನ್ನು ಮಾಡಲಾಗಿತ್ತು. ಭಕ್ತಾದಿಗಳು ಬೆಳಿಗ್ಗೆ 5ರಿಂದ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ದೇವರ ಕೀರ್ತನೆ, ಭಜನೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿದರು.

ಗಾಣಿಗರ ಪೇಟೆಯ ಶ್ರೀ ಲಕ್ಷ್ಮೀನಾರಾಯಣ ದೇವಾಲಯದಲ್ಲಿ ದೇವರಿಗೆ ಹನುಮಂತ ವಾಹನ ಶ್ರೀರಾಮಚಂದ್ರನ ಅಲಂಕಾರ ಮಾಡಲಾಗಿತ್ತು. ಪ್ರವೇಶ ದ್ವಾರದಲ್ಲಿ ರಾಮಾಯಣದ ವಿವಿಧ ದೃಶ್ಯಾವಳಿಗಳ ಮೂಲಕ ವೈಕುಂಠ ದ್ವಾರ ಪ್ರವೇಶ ವ್ಯವಸ್ಥೆ ಮಾಡಲಾಗಿತ್ತು. 18 ಸಾವಿರಕ್ಕೂ ಹೆಚ್ಚು ಭಕ್ತರು ದೇವರ ದರ್ಶನ ಪಡೆದಿರುವುದಾಗಿ ಆಡಳಿತ ಮಂಡಳಿ ತಿಳಿಸಿದೆ. ಎಲ್ಲ ಭಕ್ತರಿಗೂ ಲಾಡು ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ಲಕ್ಷ್ಮಿ ವೆಂಕಟೇಶ್ವರ ದೇವಾಲಯ 

ಮಾರ್ಕೆಟ್‌ ರಸ್ತೆಯಲ್ಲಿರುವ ಲಕ್ಷ್ಮಿವೆಂಕಟೇಶ್ವರ ದೇವಾಲಯದಲ್ಲಿ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಭಕ್ತರಿಗೂ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. 15 ಸಾವಿರ ಭಕ್ತರು ರಾತ್ರಿಯವರೆಗೂ ದೇವರ ದರ್ಶನ ಪಡೆದರು ಎಂದು ಆಡಳಿತ ಮಂಡಳಿ ತಿಳಿಸಿದೆ.

ಲಕ್ಕೊಂಡಹಳ್ಳಿ

ಇಲ್ಲಿನ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆ ದೇವರಿಗೆ ಪಂಚಾಮೃತ ಅಭಿಷೇಕ ಮಾಡಲಾಯಿತು. ದೇವರಿಗೆ ಹೂವಿನ ಅಲಂಕಾರ ಮಾಡಲಾಗಿತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು