ಗುರುವಾರ , ಏಪ್ರಿಲ್ 15, 2021
19 °C

‘ಸಂಪರ್ಕ ಕ್ರಾಂತಿಗೆ ನಾಂದಿ ಹಾಡಿದ ವಾಜಪೇಯಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಇಲ್ಲಿನ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ನಡೆಯಿತು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಎನ್‌.ನಾಗರಾಜ್‌ ಮಾತನಾಡಿ, ‘ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಯೋಜನೆ ಜಾರಿಗೆ ತರುವ ಮೂಲಕ ದೇಶದಲ್ಲಿ ರಸ್ತೆ ಸಂಪರ್ಕ ಕ್ರಾಂತಿಗೆ ವಾಜಪೇಯಿ ನಾಂದಿ ಹಾಡಿದರು. ಎಲ್ಲ ಪಕ್ಷದವರಿಂದಲೂ ಮೆಚ್ಚುಗೆಗೆ ಪಾತ್ರವಾಗಿದ್ದ ಅಜಾತಶತ್ರು ಅವರು. ರಸ್ತೆ ಸಂಪರ್ಕದಿಂದ ದೇಶದ ಪ್ರಗತಿ ವೇಗೆಪಡೆಯಲು ದಾರಿಯಾಯಿತು. ಕೇವಲ ನಾಲ್ಕು ಸ್ಥಾನಗಳಿಂದ ಬಿಜೆಪಿ ಕಟ್ಟಿ ಬೆಳೆಸಿ ಇಂದು ಪೂರ್ಣ ಬಹುಮತ ಪಡೆದು ಆಡಳಿತ ನಡೆಸುವಂತಾಗಲು ವಾಜಪೇಯಿ ಅವರ ಪರಿಶ್ರಮವಿದೆ’ ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ದೇಹದಾರ್ಢ್ಯ ಪಟು ಶ್ರೀನಿವಾಸ್, ಕ್ರಿಕೆಟ್ ಕ್ರೀಡಾಪಟು ಮಹೇಶ್‌ ಕುಮಾರ್, ಟೆಕ್ವಾಂಡೊ ಚಾಂಪಿಯನ್ ಶಿಪ್‌ನಲ್ಲಿ ಸಾಧನೆ ಮಾಡಿದ ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು

ಬಿಜೆಪಿ ನಗರ ಘಟಕದ ಅಧ್ಯಕ್ಷ ಎಚ್‌.ಎಸ್‌.ಶಿವಶಂಕರ್‌, ನಗರ ಪ್ರಧಾನ ಕಾರ್ಯದರ್ಶಿ ಮುನಿರಾಜ್, ತಾಲ್ಲೂಕು ಕಾರ್ಯದರ್ಶಿ ರಾಜಘಟ್ಟ ಕಾಂತರಾಜು, ಬಿ.ಸಿ.ನಾರಾಯಣಸ್ವಾಮಿ, ಶಿವಾನಂದರೆಡ್ಡಿ, ಕೆ.ಬಿ.ಮುದ್ದಪ್ಪ, ಕೆ.ಟಿ.ವೆಂಕಟಚಲಯ್ಯ, ಸದಾಶಿವಪ್ಪ, ನಗರ ಬಿಜೆಪಿ ಕಾರ್ಯದರ್ಶಿ ಎಂ.ಕೃಷ್ಣಮೂರ್ತಿ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವತ್ಸಲ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಗಿರಿಜಾ, ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಶಿವು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು