ಬುಧವಾರ, ಡಿಸೆಂಬರ್ 2, 2020
17 °C

ವಿಜಯಪುರ: ವಾಲ್ಮೀಕಿ ಜಯಂತಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ‘ವಾಲ್ಮೀಕಿ ಜೀವನ, ಆದರ್ಶವನ್ನು ಸ್ಫೂರ್ತಿಯಾಗಿಟ್ಟುಕೊಂಡು ಸಾಧನೆ ಮಾಡಲು ಮುಂದಾದಾಗ ಅವರ ಜಯಂತಿ ಆಚರಣೆಗೆ ನಿಜವಾದ ಅರ್ಥ ಬರಲಿದೆ’ ಎಂದು ಸೀನಿಯರ್ ಜೇಸಿಸ್ ಅಧ್ಯಕ್ಷ ವಿ.ಎನ್. ರಮೇಶ್ ಹೇಳಿದರು.

ಪಟ್ಟಣದ ರಾಷ್ಟ್ರೀಯ ಬಾಲಕಾರ್ಮಿಕ ವಿಶೇಷ ಶಾಲೆಯಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದರು.

ವಾಲ್ಮೀಕಿ ರಾಮಾಯಣ ಮಹಾಕಾವ್ಯದ ಮೂಲಕ ಭಾರತದ ಸಂಸ್ಕೃತಿ ಬಗ್ಗೆ ತಿಳಿಸಿಕೊಟ್ಟರು. ಶ್ರೀರಾಮ ಎಂದರೆ ಪಿತೃವಾಕ್ಯ ಪರಿಪಾಲಕ, ಏಕಪತ್ನಿ ವ್ರತಸ್ಥ, ಮರ್ಯಾದೆ ಪುರುಷೋತ್ತಮ ಎನ್ನುವ ಪವಿತ್ರ ಬಾಂಧವ್ಯ ತಿಳಿಸಿದ ವಾಲ್ಮೀಕಿ ಅವರನ್ನು ನಾವೆಲ್ಲರೂ ಪ್ರತಿನಿತ್ಯ ನೆನೆಯಬೇಕು ಎಂದು ಹೇಳಿದರು.

ರಾಷ್ಟ್ರೀಯ ಬಾಲಕಾರ್ಮಿಕ ವಿಶೇಷ ಶಾಲೆಯ ವೃತ್ತಿಪರ ಶಿಕ್ಷಕಿ ಮೀನಾಕ್ಷಿ,ಭಾರತೀಯ ಜನಜಾಗೃತಿ ಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿ. ಮುನಿಯಪ್ಪ ಮಾತನಾಡಿದರು. ಶಿಕ್ಷಕ ಶಿವಕುಮಾರ್ ಹಾಜರಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು