ಆನೇಕಲ್: ತಾಲ್ಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ಆವರಣದದಲ್ಲಿ ಬುದ್ಧ, ಬಸವಣ್ಣ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಉದ್ಘಾಟನೆ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ, ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮವು ಫೆ. 18ರಂದು ನಡೆಯಲಿದೆ ಎಂದು ಅಧ್ಯಕ್ಷೆ ಎಂ. ಮುನಿರತ್ನ ತಿಳಿಸಿದರು.

ತಾಲ್ಲೂಕಿನ ಹೆನ್ನಾಗರದಲ್ಲಿ ಕಾರ್ಯಕ್ರಮದ ಮಾಹಿತಿ ಪುಸ್ತಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಂಥಾಲಯ ಕಟ್ಟಡ, ಅಂಗನವಾಡಿ ಕಟ್ಟಡಗಳು, ಸ್ತ್ರೀಶಕ್ತಿ ಭವನ, ಹೈಮಾಸ್ಟ್ ದೀಪದ ಉದ್ಘಾಟನೆ ಕಾರ್ಯಕ್ರಮ ರೂಪಿಸಲಾಗಿದೆ. ತಾಲ್ಲೂಕಿನಲ್ಲಿ ಇದೇ ಮೊದಲ ಬಾರಿಗೆ ರೈತರಿಗೆ ಅನುಕೂಲ ಮಾಡಿಕೊಡಲು ಹಸು ಸಾಕಾಣಿಕೆಗೆ ಸಹಾಯಧನ, ಅಡುಗೆ ಅನಿಲ ಸಿಲಿಂಡರ್ ವಿತರಣಾ ಕಾರ್ಯಕ್ರಮ ನಡೆಯಲಿದೆ. ₹ 16 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯರಾದ ಗೋಪಿನಾಥ ರೆಡ್ಡಿ, ಪುಟ್ಟಣ್ಣ, ಅ. ದೇವೇಗೌಡ, ಪಿ.ಆರ್. ರಮೇಶ್ ಪಾಲ್ಗೊಳ್ಳಲಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಚ್.ಜೆ. ಪ್ರಸನ್ನಕುಮಾರ್ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಶಿಕ್ಷಣ, ಮಹಿಳಾ ಸಬಲೀಕರಣ, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ವಿವಿಧ ಯೋಜನೆಯಡಿ ನೆರವು ಸೇರಿದಂತೆ ವಿವಿಧ ಕಾರ್ಯಕ್ರಮ ರೂಪಿಸಲಾಗಿದೆ. ಪಂಚಾಯಿತಿಯ ಅಭಿವೃದ್ಧಿ ಕೈಪಿಡಿಯನ್ನು ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದರು.

ಗ್ರಾಮ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಸದಸ್ಯ ಕಿರಣ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಕಾಂತರಾಜು, ಅಶೋಕ್, ದೀಪ, ಮನು, ಶಿವರಾಜು, ಲೋಕನಾಥ್, ಮಾಜಿ ಸದಸ್ಯ ಆರ್.ಎಸ್. ಪ್ರಕಾಶ್, ಮಂಜು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದರಾಜು, ಕಾರ್ಯದರ್ಶಿ ತೇಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.