ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮ–ಅಧರ್ಮ ಯುದ್ಧದಲ್ಲಿ ‘ಇಂಡಿಯಾ’ಗೆ ಜಯ: ಕೆ.ಎಚ್.ಮುನಿಯಪ್ಪ

ರಕ್ಷಾ ರಾಮಯ್ಯ ಪರ ಪ್ರಚಾರ ವೇಳೆ ಸಚಿವ ಕೆ.ಎಚ್.ಮುನಿಯಪ್ಪ
Published 15 ಏಪ್ರಿಲ್ 2024, 4:49 IST
Last Updated 15 ಏಪ್ರಿಲ್ 2024, 4:49 IST
ಅಕ್ಷರ ಗಾತ್ರ

ವಿಜಯಪುರ(ದೇವನಹಳ್ಳಿ): ದೇಶದಲ್ಲಿ ಧರ್ಮ-ಅಧರ್ಮ ನಡುವೆ ಲೋಕಸಭಾ ಚುನಾವಣೆ ನಡೆಯುತ್ತಿದೆ. ಕಾರ್ಪೋರೇಟ್ ಕಂಪನಿ ಉದ್ಧಾರ ಮಾಡುವ ಸರ್ಕಾರ ಮತ್ತು ಸಮಾಜದ ಎಲ್ಲಾ ಜಾತಿ, ವರ್ಗವನ್ನು ಸಮಾನತೆಯಿಂದ ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎನ್ನುವ ಇಂಡಿಯಾ ಮೈತ್ರಿ ಕೂಟ ನಡುವೆ ಸೆಣಸಾಟ‌ ನಡೆಯುತ್ತಿದೆ. ಅಂತಿಮವಾಗಿ ಧರ್ಮಕ್ಕೆ ಜಯ ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಹೋಬಳಿಯ ಭಟ್ರೇನಹಳ್ಳಿಯ ವ್ಯಾಪ್ತಿಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಅವರ ಪರ ಮತಯಾಚಿಸಿ ಅವರು ಮಾತನಾಡಿದರು.

ಕಳೆದ 10 ವರ್ಷಗಳಲ್ಲಿ ಕೇಂದ್ರದ ಬಿಜೆಪಿ ಸರ್ಕಾರ, ಬಡವರು, ಮಧ್ಯಮ ವರ್ಗದವರ ಏಳಿಗಾಗಿ ಏನೂ ಮಾಡಲಿಲ್ಲ. ಹಿಂದೆ ಯುಪಿಎ ಸರ್ಕಾರದಲ್ಲಿ ಮಾಡಿದ್ದ ಕಾರ್ಯಕ್ರಮಗಳನ್ನು ಹೊರತುಪಡಿಸಿ, ಬಡವರಿಗೆ ಉಪಯೋಗ ಆಗುವ ಯಾವ ಕಾರ್ಯಕ್ರಮವನ್ನು ಮಾಡಲಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ನಿರುದ್ಯೋಗ ಸಮಸ್ಯೆಯನ್ನು ಜಾಸ್ತಿ ಮಾಡಿದೆ ಎಂದು ದೂರಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಮಾತನಾಡಿ, ಯುವಕರಿಗೆ ಉದ್ಯೋಗ, ಶಿಕ್ಷಣ ಸಂಸ್ಥೆ ನಿರ್ಮಾಣ, ಪ್ರತಿಯೊಬ್ಬರ ಆರೋಗ್ಯ ಕಾಪಾಡುವುದು, ರೈತರು ಬೆಳೆದಿರುವ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವುದು ನಮ್ಮ ಬದ್ಧತೆಯಾಗಿದೆ ಎಂದು ಹೇಳಿದರು.

‘ನನ್ನ ವಿರುದ್ಧವಾಗಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಯ ವಿರುದ್ಧ ಗೋ ಬ್ಯಾಕ್ ಘೋಷಣೆ ಕೇಳಿ ಬರುತ್ತಿದೆ. ರೈತರ ವಿರೋಧಿಯಾಗಿ ಕೇಂದ್ರದ ಬಿಜೆಪಿ ಸರ್ಕಾರದ ನಡೆದುಕೊಳ್ಳುತ್ತಿದೆ’ ಎಂದರು.

ಹಿರಿಯ ಕಾಂಗ್ರೆಸ್ ಮುಖಂಡ ಮುನಿನರಸಿಂಹಯ್ಯ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರವು ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡಲಿಲ್ಲ, ರಸಗೊಬ್ಬರಗಳ ಬೆಲೆ ಏರಿಕೆ ಮಾಡಿದೆ.ರೈತರಿಂದ ಕಿತ್ತುಕೊಂಡ ಹಣವನ್ನು ಕಿಸಾನ್ ಸಮ್ಮಾನ್ ರೂಪದಲ್ಲಿ ಕೇವಲ ₹6 ಸಾವಿರ ಪುನಃ ರೈತರಿಗೆ ಕೊಡುತ್ತಿದ್ದಾರೆ ಎಂದು ದೂರಿದರು.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಅಭಿಷೇಕ್ ದತ್ತ, ಬಯಪ ಅಧ್ಯಕ್ಷ ಶಾಂತಕುಮಾರ್, ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಜಗನ್ನಾಥ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಘಟಕದ ಅಧ್ಯಕ್ಷ ಬಿ.ರಾಜಣ್ಣ, ಕಾಂಗ್ರೆಸ್ ನಾಯಕಿ ಅನಂತಕುಮಾರಿಚಿನ್ನಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ನಾಗೇಶ್, ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ರಾಮಚಂದ್ರಪ್ಪ, ಕೆಪಿಸಿಸಿ ಸದಸ್ಯ ಚಿನ್ನಪ್ಪ, ವಿಜಯಪುರ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ವೀರೇಗೌಡ, ಚೈತ್ರಾವೀರೇಗೌಡ, ಸಿ.ಕೆ.ರಾಮಚಂದ್ರಪ್ಪ, ಕೆ.ಸಿ.ಮಂಜುನಾಥ್, ಲಕ್ಷ್ಮಣ್ ಗೌಡ, ಚಂದೇನಹಳ್ಳಿ ಮುನಿಯಪ್ಪ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾಜು, ಭಟ್ರೇನಹಳ್ಳಿ ನಾರಾಯಣಪ್ಪ, ಮುನಿಆಂಜಿನಪ್ಪ, ರಾಧಮ್ಮ, ಮಾಧವಿ, ವಿನೋದಮ್ಮ, ಅಕ್ಕಯಮ್ಮ, ಚಂದ್ರಪ್ಪ, ಹಾರೋಹಳ್ಳಿ ರಘು, ಕೃಷ್ಣಮೂರ್ತಿ, ಮುದುಗುರ್ಕಿ ಮೂರ್ತಿ, ಮಾರಪ್ಪ, ದೊಡ್ಡಸಾಗರಹಳ್ಳಿ ಶ್ರೀನಿವಾಸ್, ಪ್ರಕಾಶ್ ಹಾಜರಿದ್ದರು.

ಸಭೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು.
ಸಭೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT