ವಿಜಯಪುರ(ದೇವನಹಳ್ಳಿ): ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಸಮುದಾಯ ಆರೋಗ್ಯ ಕೇಂದ್ರದ ಬಳಿ ಅಕ್ಕ ಪಡೆ ತಂಡದಿಂದ ಶುಕ್ರವಾರ ಮಹಿಳೆಯರು ಹಾಗೂ ಮಕ್ಕಳಿಗಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.

ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತುರ್ತು ರಕ್ಷಣೆ ನೀಡುವ ಹಾಗೂ ಸಕಾಲಿಕವಾಗಿ ಸಹಾಯ ಹಸ್ತ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಅಕ್ಕ ಪಡೆ ಆರಂಭಿಸಿದ್ದು, ತುರ್ತು ಸಂದರ್ಭದಲ್ಲಿ ಮಹಿಳೆಯರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಅಕ್ಕ ಪಡೆಯ ಸಿಬ್ಬಂದಿ ಹೇಮಾವತಿ ತಿಳಿಸಿದರು.

ಅಕ್ಕ ಪಡೆಯ ಉದ್ದೇಶ, ಕರ್ತವ್ಯಗಳು ಹಾಗೂ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಕೈಗೊಳ್ಳಲಾಗುವ ಕ್ರಮಗಳ ಕುರಿತು ಗೃಹ ರಕ್ಷಕ ದಳದ ನಂದಿನಿ ವಿವರಿಸಿದರು. ಪೊಲೀಸ್ ಸಿಬ್ಬಂದಿ ಶಿವಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-15-662871681

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.