ವಿಜಯಪುರ (ದೇವನಹಳ್ಳಿ): ಇಲ್ಲಿನ ಬಸ್ ನಿಲ್ದಾಣದ ಆವರಣದಲ್ಲಿ

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಅಂಬೇಡ್ಕರ್ ರಚಿಸಿದ ಸಂವಿಧಾನ ಭಾರತವನ್ನು ವಿಶ್ವದ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ಮಾಡಿದೆ. ಶೋಷಿತ ವರ್ಗದ ಧ್ವನಿಯಾಗಿದ್ದ ಅವರು ಸಮಾಜಕ್ಕೆ ನೀಡಿದ ‘ಶಿಕ್ಷಣ, ಸಂಘಟನೆ, ಹೋರಾಟ’ ಎಂಬ ಮಂತ್ರ ಇಂದಿನ ಯುವ ಪೀಳಿಗೆಗೆ ಸದಾ ಸ್ಫೂರ್ತಿದಾಯಕವಾಗಿದೆ ಎಂದು ಕಾಂಗ್ರೆಸ್ ಮುಖಂಡ ಭಾನುಚಂದ್ರ ತಿಳಿಸಿದರು.

ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್ ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಾಭಿಮಾನದಿಂದ ಬದುಕಲು ಅವರ ಹೋರಾಟವೇ ಮೂಲ ಕಾರಣ. ಅವರ ಸಮಾನತೆ ಸಿದ್ಧಾಂತ ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಸದೃಢ ಸಮಾಜದ ನಿರ್ಮಾಣ ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ನಂದಕುಮಾರ್, ಕೆ.ಎಂ.ಮಧು, ಸೈಫುಲ್ಲ, ರಾಘವ, ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-15-2051865367

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.